ಮೈಸೂರು

ಕುಕ್ಕರಹಳ್ಳಿ ಕೆರೆ ಅಭಿವೃದ್ಧಿ ವಿಚಾರ : ಅಭಿಪ್ರಾಯ ಆಲಿಸಲಿರುವ ತಜ್ಞರ ತಂಡ

ಕುಕ್ಕರಹಳ್ಳಿ ಕೆರೆ ಅಭಿವೃದ್ಧಿಗೆ ಸಂಬಂಧಿಸಿದಂತೆ ವರದಿ ನೀಡಲು ಕರ್ನಾಟಕ ಸರೋವರ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ ನಿಯೋಜಿಸಿರುವ ತಜ್ಞರಾದ IISc ನಿವೃತ್ತ ಪ್ರಾಧ್ಯಾಪಕ ಬೆಂಗಳೂರಿನ ರಾಮ್ ಪ್ರಸಾದ್ ಮತ್ತು ನಿವೃತ್ತ ಮುಖ್ಯ ಇಂಜಿನಿಯರ್ ಮೈಸೂರಿನ ಸಿ.ಎನ್. ಬಾಬು ಅವರು ನಾಳೆ (ಮಾರ್ಚ್‍ 14) ಮೈಸೂರಿಗೆ ಭೇಟಿ ನೀಡಲಿದ್ದಾರೆ.

ಮಾ.14ರ ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿ, ಆಹ್ವಾನಿತ ಪರಿಣಿತರು ಹಾಗೂ ಅಧಿಕಾರಿಗಳ ಜೊತೆ ಚರ್ಚಿಸಿದ ನಂತರ ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆ ನಡೆಸುವರು. ಮಧ್ಯಾಹ್ನ 12 ಗಂಟೆಗೆ ಕುಕ್ಕರಹಳ್ಳಿ ಕೆರೆಗೆ ಭೇಟಿ ನೀಡಿ, ಸ್ಥಳ ಪರಿಶೀಲನೆ ಹಾಗೂ ಪರಿಣಿತರೊಂದಿಗೆ ಚರ್ಚೆ ನಡೆಸಲಿದ್ದಾರೆ.

ಸಾರ್ವಜನಿಕರ ಭೇಟಿ : ಸಾರ್ವಜನಿಕರ ಭೇಟಿಗೂ ಅವಕಾಶ ನೀಡಿದ್ದು, ಸಂಜೆ 4 ಗಂಟೆಗೆ ಸಾರ್ವಜನಿಕರು ಕುಕ್ಕರಹಳ್ಳಿ ಕೆರೆ ಪ್ರದೇಶದಲ್ಲಿ ಕರ್ನಾಟಕ ಸರೋವರ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ ನಿಯೋಜಿಸಿರುವ ತಜ್ಞರನ್ನು ಭೇಟಿಮಾಡಿ ತಮ್ಮ ಅನಿಸಿಕೆ ಅಭಿಪ್ರಾಯಗಳನ್ನು ತಿಳಿಸಬಹುದಾಗಿದೆ.

(ಕೆ.ಕೆ.ಕೆ/ಎನ್.ಬಿ.ಎನ್)

Leave a Reply

comments

Related Articles

error: