ಪ್ರಮುಖ ಸುದ್ದಿ

ಮಹದಾಯಿ ನದಿ ನೀರು ಹಂಚಿಕೆ ; ಸುಪ್ರೀಂ ಕೋರ್ಟ್ ಸೂಚನೆ ಸ್ವಾಗತಾರ್ಹ: ಮುಖ್ಯಮಂತ್ರಿಬಿ ಎಸ್ ಯಡಿಯೂರಪ್ಪ

ರಾಜ್ಯ(ಬೆಂಗಳೂರು)ಫೆ.22:- ಮಹದಾಯಿ ನದಿ ನೀರು ಹಂಚಿಕೆ ಸಂಬಂಧ ಗೆಜೆಟ್‌ ಅಧಿಸೂಚನೆ ಹೊರಡಿಸಲು ಸುಪ್ರಿಂ ಕೋರ್ಟ್‌, ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿರುವುದು ಸ್ವಾಗತಾರ್ಹ ಎಂದು ಮುಖ್ಯಮಂತ್ರಿ   ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕೋರ್ಟ್ ನ ಈ ಸೂಚನೆಯಿಂದ ನೀರಿನ ಬಳಕೆಗೆ ಇದ್ದ ತೊಡಕು ನಿವಾರಣೆಯಾದಂತಾಗಿದೆ ಎಂದಿದ್ದಾರೆ.

ಕುಡಿಯುವ ನೀರಿಗಾಗಿ ಪರದಾಡುತ್ತಿದ್ದ ಉತ್ತರ ಕರ್ನಾಟಕದ ನಾಲ್ಕು ಜಿಲ್ಲೆಗಳ 11 ತಾಲೂಕಿನ ಗ್ರಾಮಗಳ ಜನರ ಪಾಲಿಗೆ ಇದು ಬಹಳ ಸಂತಸದ ಸಂಗತಿ ಎಂದು ಮುಖ್ಯಮಂತ್ರಿಗಳು ತಮ್ಮ ಹೇಳಿಕೆಯಲ್ಲಿ ಅಭಿಪ್ರಾಯಪಟ್ಟಿದ್ದಾರೆ. (ಎಸ್.ಎಚ್)

Leave a Reply

comments

Related Articles

error: