ಮೈಸೂರು

ಬೈಕ್ ಡಿಕ್ಕಿ : ಚಿಕಿತ್ಸೆ ಫಲಿಸದೇ ಸವಾರ ಸಾವು

ಮೈಸೂರು,ಫೆ.22:- ಚಲಿಸುತ್ತಿದ್ದ ಬೈಕ್ ಗೆ ವೇಗವಾಗಿ ಬಂದ ಮತ್ತೊಂದು ಬೈಕ್ ಹಿಂದಿನಿಂದ ಡಿಕ್ಕಿ ಹೊಡೆದ ಕಾರಣ ನಿಯಂತ್ರಣ ತಪ್ಪಿ ಬೈಕ್ ಸವಾರರೋರ್ವರು ಕೆಳಕ್ಕೆ ಬಿದ್ದು ಗಾಯಗೊಂಡ ಘಟನೆ ಜಯದೇವ ನಗರ ಕೈಗಾರಿಕಾ ಪ್ರದೇಶದಲ್ಲಿ ನಡೆದಿತ್ತು. ಚಿಕಿತ್ಸೆ ಫಲಿಸದೇ ಬೈಕ್ ಸವಾರ ಸಾವನ್ನಪ್ಪಿದ್ದಾರೆ.

ಮೃತರನ್ನು ಮಹಮ್ಮದ್ ಸಲ್ಮಾರ್ (69) ಎಂದು ಗುರುತಿಸಲಾಗಿದೆ. ಗುರುವಾರ ಮಧ್ಯಾಹ್ನ ಈ ಅಪಘಾತ ನಡೆದಿದ್ದು, ತಕ್ಷಣವೇ ಮಹಮ್ಮದ್ ಸಲ್ಮಾರ್ ರನ್ನು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ವಿವಿಪುರಂ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: