ಮೈಸೂರು

ಗೃಹಿಣಿ ಆತ್ಮಹತ್ಯೆ : ಕೆಂಪಿಸಿದ್ದನಹುಂಡಿ ಗ್ರಾಮದಲ್ಲಿ ಘಟನೆ

ಮೈಸೂರು,ಫೆ.24:-  ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲೂಕಿನ ಕೆಂಪಿಸಿದ್ದನಹುಂಡಿ ಗ್ರಾಮದಲ್ಲಿ ನಡೆದಿದೆ.

ಕೆಂಪಿಸಿದ್ದನ ಹುಂಡಿ ಗ್ರಾಮದ ನಿವಾಸಿ ಅನ್ನಪೂರ್ಣ (21) ಆತ್ಮಹತ್ಯೆ ಮಾಡಿಕೊಂಡ   ಮಹಿಳೆ. 2 ತಿಂಗಳ ಹಿಂದೆ ಕುಮಾರ್ ಎಂಬವರನ್ನು ಮದುವೆಯಾಗಿದ್ದರು. ಆತ್ಮಹತ್ಯೆ ಹಿಂದಿನ ಕಾರಣ ತಿಳಿದುಬಂದಿಲ್ಲ. ಆಸ್ಪತ್ರೆಗೆ ತಾಲೂಕಿನ ತಹಶೀಲ್ದಾರರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

comments

Related Articles

error: