ಮನರಂಜನೆಮೈಸೂರು

ನಾಳೆ ಮೈಸೂರಿನಲ್ಲಿ ಹಸೆ ಮಣೆ ಏರಲಿದ್ದಾರೆ ಬಿಗ್ ಬಾಸ್ ಖ್ಯಾತಿಯ ರ್ಯಾಪರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ

 ಮೈಸೂರು,ಫೆ.25:- ಬಿಗ್ ಬಾಸ್ ಖ್ಯಾತಿಯ ರ್ಯಾಪರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅವರ ವಿವಾಹವು ಫೆ.26 ಮತ್ತು 27ರಂದು ಮೈಸೂರಿನ ಖಾಸಗಿ ಕಲ್ಯಾಣ ಮಂಟಪವೊಂದರಲ್ಲಿ ನಡೆಯಲಿದ್ದು, ಭರದ ಸಿದ್ಧತೆ ನಡೆದಿದೆ.

ಮೈಸೂರಿನ ದಟ್ಟಗಳ್ಳಿಯಲ್ಲಿರುವ ನಿವೇದಿತಾ ಗೌಡ ಅವರ ಮನೆಯಲ್ಲಿ ನಿನ್ನೆ  ಫೋಟೋ ಶೂಟ್ ಹಾಗೂ ಅರಿಶಿನ ಶಾಸ್ತ್ರ ನಡೆಯಿತು.   ನಿವೇದಿತಾ ಗೌಡ ಹಾಗೂ ಚಂದನ್ ಶೆಟ್ಟಿಯ ವಿವಾಹ ನಾಳೆ ಮತ್ತು ನಾಡಿದ್ದು ಎರಡು ದಿನಗಳ ಕಾಲ ನಗರದ ಕಲ್ಯಾಣ ಮಂಟಪದಲ್ಲಿ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ  ನಿವೇದಿತಾ ಗೌಡ ಮನೆಯಲ್ಲಿ ಹಿರಿಯರ ಸಮ್ಮುಖದಲ್ಲಿ ಅರಿಶಿನ ಶಾಸ್ತ್ರ ನೆರವೇರಿತು. ನಂತರ ಮನೆಯ ಮುಂಭಾಗದಲ್ಲಿ ಫೋಟೋ ಶೂಟ್​ನಲ್ಲಿ ಪಾಲ್ಗೊಂಡ ನಿವೇದಿತಾ ಗೌಡ ಮಾತನಾಡಿ, ಮದುವೆಯ ಎಲ್ಲಾ ಸಿದ್ಧತೆಗಳನ್ನು ಕುಟುಂಬದವರು ಮಾಡಿದ್ದಾರೆ. ನಾನು ಬೆಂಗಳೂರಿನಿಂದ ಬಂದಿದ್ದೇನೆ. ಎಲ್ಲಾ ಸಿದ್ಧತೆ ಪೂರ್ಣಗೊಂಡಿದೆ. ಎಲ್ಲಾ ಸೆಲೆಬ್ರಿಟಿಗಳಿಗೂ ಮದುವೆಗೆ ಆಹ್ವಾನ ನೀಡಿದ್ದೇವೆ. ಮದುವೆ ಬಳಿಕ ಇಬ್ಬರೂ ಯುಕೆಗೆ ಹೋಗುವ ಪ್ಲಾನ್ ಇದೆ ಎಂದಿದ್ದಾರೆ.

ಈ ಮದುವೆ ಸಮಾರಂಭಕ್ಕೆ ಸ್ಯಾಂಡಲ್‍ವುಡ್‍ನ ಕಲಾವಿದರು, ಗಾಯಕರು ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು ಸೇರಿ ಸುಮಾರು ಐದು ಸಾವಿರಕ್ಕೂ ಅಧಿಕ ಮಂದಿ ಸಾಕ್ಷಿ ಯಾಗುವ ನಿರೀಕ್ಷೆ ಇದೆ. ಚಂದನ್ ಹಾಗೂ ನಿವೇದಿತಾ ಮದುವೆ ಆಮಂತ್ರಣ ನೀಡುವಲ್ಲಿ ಇಷ್ಟು ದಿನ ಬ್ಯುಸಿಯಾಗಿದ್ದರು. ಇತ್ತೀಚೆಗೆಷ್ಟೆ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ, ಚಾಲೆಂಜಿಂಗ್ ಸ್ಟಾರ್ ದರ್ಶನ್, ಪುನೀತ್ ರಾಜ್‍ಕುಮಾರ್ ಸೇರಿದಂತೆ ಹಲವು ಗಣ್ಯರಿಗೆ ಲಗ್ನ ಪತ್ರಿಕೆ ನೀಡಿದ್ದರು. ದರ್ಶನ್ ಅವರನ್ನು ಭೇಟಿಯಾಗಿದ್ದ ಸಂತಸವನ್ನು ಚಂದನ್ ಮತ್ತು ನಿವೇದಿತಾ ಇನ್‍ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿದ್ದರು. ಹೀಗೆ ಸಿನಿಮಾರಂಗದವರಿಗೆ ಮದುವೆಯ ಆಮಂತ್ರಣ ಪತ್ರಿಕೆಯನ್ನು ನೀಡಿದ್ದಾರೆ. ಯುವ ದಸರಾದ ಸರ್ಕಾರಿ ವೇದಿಕೆಯಲ್ಲಿ ಚಂದನ್ ಶೆಟ್ಟಿ ಅಭಿಮಾನಿಗಳ ಮುಂದೆ ಗೆಳತಿ ನಿವೇದಿತಾರಿಗೆ ಪ್ರಪೋಸ್ ಮಾಡಿದ್ದರು. ವೇದಿಕೆಯಲ್ಲಿಯೇ ರಿಂಗ್ ತೊಡಿಸಿ ತಮ್ಮ ಪ್ರೇಮ ವಿಚಾರವನ್ನು ಚಂದನ್ ಅಧಿಕೃತವಾಗಿ ಹೇಳಿಕೊಂಡಿದ್ದರು. ಬಳಿಕ ಅಕ್ಟೋಬರ್ 21ರಂದು ಚಂದನ್ ಶೆಟ್ಟಿ ತಮ್ಮ ಆತ್ಮೀಯ ಗೆಳತಿ ಬಾರ್ಬಿ ಗರ್ಲ್ ನಿವೇದಿತಾ ಗೌಡ ಜೊತೆ ಮೈಸೂರಿನ ಖಾಸಗಿ ಹೋಟೆಲಿನಲ್ಲಿ ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದೀಗ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: