ಮೈಸೂರು

ಕಪಿಲಾ ನದಿ ಸೇತುವೆ ಬಳಿಯ ಕಂಬಕ್ಕೆ ಬೈಕ್ ಡಿಕ್ಕಿ : ಸವಾರ ಸ್ಥಳದಲ್ಲೇ ಸಾವು

ಮೈಸೂರು,ಫೆ.26:-   ತಿ.ನರಸೀಪುರದ ಕಪಿಲಾ ನದಿ ಸೇತುವೆ ಬಳಿಯ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ  ಬೈಕ್  ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.

ಮೃತರನ್ನು ತಿ.ನರಸೀಪುರ ಪಟ್ಟಣದ ನಿವಾಸಿ ನಂದಕುಮಾರ್ (38) ಎಂದು ಗುರುತಿಸಲಾಗಿದೆ. ಇವರು ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಸೇತುವೆ ಬದಿಯ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಬೈಕ್ ನಿಂದ ಕೆಳಕ್ಕೆ ಬಿದ್ದಿದಾರೆ. ತೀವ್ರ ರಕ್ತ ಸ್ರಾವದಿಂದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ತಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: