ದೇಶಪ್ರಮುಖ ಸುದ್ದಿ

ಶಾಂತಿ ಕಾಪಾಡುವಂತೆ ಮನವಿ ಮಾಡಿದ ಪ್ರಧಾನಿ ಮೋದಿ

ನವದೆಹಲಿ,ಫೆ.26-ಶಾಂತಿ ಕಾಪಾಡುವಂತೆ ದೆಹಲಿ ಜನರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.

ನಿನ್ನೆಯವರೆಗೂ ಅಮೆರಿಕ ಅಧ್ಯಕ್ಷರ ಜತೆ ದ್ವಿಪಕ್ಷೀಯ ಮಾತುಕತೆ, ಸಭೆಗಳಲ್ಲಿ ತೊಡಗಿಕೊಂಡಿದ್ದ ಮೋದಿ ಇದೀಗ ದೆಹಲಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಈಶಾನ್ಯ ದೆಹಲಿಯಲ್ಲಿ ಭುಗಿಲೆದ್ದಿರುವ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಮೋದಿ, ನಮ್ಮ ದೇಶದಲ್ಲಿ ಶಾಂತಿ ಮತ್ತು ಸಾಮರಸ್ಯವೇ ಮುಖ್ಯ. ದೆಹಲಿಯ ನನ್ನ ಸಹೋದರ, ಸಹೋದರಿಯರು ದಯವಿಟ್ಟು ಸಹನೆಯಿಂದ ಇರಬೇಕು. ಎಂಥದ್ದೇ ಸಮಯದಲ್ಲೂ ಭ್ರಾತೃತ್ವವನ್ನು ಕಾಪಾಡಬೇಕು. ಆದಷ್ಟು ಶೀಘ್ರವೇ ದೆಹಲಿ ಸಹಜಸ್ಥಿತಿಗೆ ಮರಳುವುದು ತುಂಬ ಮುಖ್ಯ ಎಂದಿದ್ದಾರೆ.

ಅಂತೆಯೇ ದೆಹಲಿಯ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಗಲಭೆ ಪರಿಸ್ಥಿತಿಯ ಬಗ್ಗೆ ವ್ಯಾಪಕ ಪರಿಶೀಲನೆ, ಶಾಂತಿ ಕಾಪಾಡಲು, ಪರಿಸ್ಥಿತಿಯನ್ನು ನಿಯಂತ್ರಣ ಮಾಡಲು ದೆಹಲಿ ಪೊಲೀಸರು, ಭದ್ರತಾ ಸಿಬ್ಬಂದಿ ಪ್ರಯತ್ನ ಪಡುತ್ತಿದ್ದಾರೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಕಳೆದ ಮೂರು ದಿನಗಳಿಂದಲೂ ಈಶಾನ್ಯ ದೆಹಲಿಯಲ್ಲಿ ಸಿಎಎ ಪರ-ವಿರೋಧಿ ಬಣಗಳ ನಡುವೆ ಸಂಘರ್ಷ ಭುಗಿಲೆದ್ದಿದ್ದು, ಹಿಂಸಾಚಾರಕ್ಕೆ ತಲುಪಿದೆ. 20 ಮಂದಿ ಸಾವನ್ನಪ್ಪಿದ್ದಾರೆ. (ಎಂ.ಎನ್)

Leave a Reply

comments

Related Articles

error: