ಮೈಸೂರು

ಫೆ.27-28 : “ಭಾರತದಲ್ಲಿ ಪ್ರಜಾಪ್ರಭುತ್ವ ಮತ್ತು ಸಾಮಾಜಿಕ ನ್ಯಾಯ” ಕುರಿತ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ

ಮೈಸೂರು,ಫೆ.26:- ಮಾನಸ ಗಂಗೋತ್ರಿಯ ವಿಜ್ಞಾನಭವನದಲ್ಲಿ ಫೆಬ್ರವರಿ 27 ಮತ್ತು 28ರಂದು ಮೈಸೂರು ವಿವಿ, ರಾಜ್ಯಶಾಸ್ತ್ರ ಅಧ್ಯಯನ ವಿಭಾಗ, ಶ್ರೀ ಎನ್ ರಾಚಯ್ಯ ಅಧ್ಯಯನ ಪೀಠದ ವತಿಯಿಂದ  “ಭಾರತದಲ್ಲಿ ಪ್ರಜಾಪ್ರಭುತ್ವ ಮತ್ತು ಸಾಮಾಜಿಕ ನ್ಯಾಯ” ಎಂಬ ವಿಷಯದ ಕುರಿತು  ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ.

ಮೈಸೂರು ಪತ್ರಕರ್ತರ ಭವನದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ಅಧ್ಯಕ್ಷ ಪ್ರೊ.ಕೃಷ್ಣ ಹೊಂಬಾಳ್ ಮಾಹಿತಿ ನೀಡಿ  ಭಾರತದಲ್ಲಿ ಪ್ರಜಾಸತ್ತಾತ್ಮಕ ಚೌಕಟ್ಟಿನೊಳಗೆ ಸಾಮಾಜಿಕ ನ್ಯಾಯದ ವಿಚಾರವು ಸಮಕಾಲೀನ ಸಂದರ್ಭದಲ್ಲಿ ಹೆಚ್ಚು ಚರ್ಚೆಗೆ, ಸಂವಾದಕ್ಕೆ ಎಡೆಮಾಡಿಕೊಡುತ್ತಿರುವ ಕಾಲ ಘಟ್ಟದಲ್ಲಿ ಸದರಿ ವಿಷಯದ ಕುರಿತ ವಿಚಾರ ಸಂಕಿರಣವು ಅತ್ಯಂತ ಸಂದರ್ಭೋಚಿತವಾದುದಾಗಿದೆ ಎಂದರು.

ಎನ್.ರಾಚಯ್ಯ ಅಧ್ಯಯನ ಪೀಠದ ಘನ ಧೈಯೋದ್ದೇಶಗಳಿಗೆ ಅನುಗುಣವಾಗಿ ಆಯೋಜಿಸಲಾಗುತ್ತಿರುವ  ರಾಷ್ಟ್ರೀಯ ವಿಚಾರ ಸಂಕಿರಣವನ್ನು ಕರ್ನಾಟಕದ ಹಾಲಿ ವಿರೋಧ ಪಕ್ಷದ ನಾಯಕ  ಹಾಗೂ ಮಾಜಿ ಮುಖ್ಯಮಂತ್ರಿಗಳಾದ   ಸಿದ್ದರಾಮಯ್ಯನವರು ಉದ್ಘಾಟಿಸಲಿದ್ದಾರೆ. ರಾಯಚೂರು ವಿಶ್ವವಿದ್ಯಾನಿಲಯದ ವಿಶೇಷ ಅಧಿಕಾರಿಗಳಾದ ಪ್ರೊ.ಮುಜಾಫರ್ ಅಸ್ಸಾದಿ  ದಿಕ್ಕೂಚಿ ಭಾಷಣವನ್ನು ಮಾಡಲಿದ್ದು, ವಿಧಾನ ಪರಿಷತ್ ಸದಸ್ಯರಾದ   ಆರ್. ಧರ್ಮಸೇನ  ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೈಸೂರು ವಿಶ್ವವಿದ್ಯಾನಿಲಯದ ಕುಲಸಚಿವರಾದ ಪ್ರೊ.ಶಿವಪ್ಪ ವಹಿಸಲಿದ್ದಾರೆ. ಇದಲ್ಲದೆ ಎರಡು ದಿನಗಳ ವಿವಿಧ ಗೋಷ್ಠಿಗಳಲ್ಲಿ ಹೊರ ರಾಜ್ಯದ ಮತ್ತು ಹೊರ ಜಿಲ್ಲೆಯ ಸಂಪನ್ಮೂಲ ವ್ಯಕ್ತಿಗಳು ಹಾಗೂ ಸಂಶೋಧಕರು ಭಾರತದಲ್ಲಿ ಪ್ರಜಾಪ್ರಭುತ್ವ ಮತ್ತು ಸಾಮಾಜಿಕ ನ್ಯಾಯಕ್ಕೆ ಸಂಬಂಧಿಸಿದ ವಿವಿಧ ಮಜಲುಗಳು ಮತ್ತು ವಿವಾದಾಂಶಗಳ ಕುರಿತು ಪ್ರಬಂಧಗಳನ್ನು ಮಂಡಿಸಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ   ಎನ್.ರಾಚಯ್ಯ ಅಧ್ಯಯನ ಪೀಠ ಹಾಗೂ ಕಾರ್ಯಕ್ರಮದ ಸಂಯೋಜಕರಾದ ಪ್ರೊ.ಜಿ.ಟಿ.ರಾಮಚಂದ್ರಪ್ಪ   ಸಂದರ್ಶಕ ಪ್ರಾಧ್ಯಾಪಕರಾದ ಪ್ರೊ.ಹೆಚ್.ಬಿ.ಮಲ್ಲಿಕಾರ್ಜುನಸ್ವಾಮಿ ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: