ಮೈಸೂರು

ಮೈಸೂರಿನಲ್ಲಿ ರಾಜ್ಯ ಮಟ್ಟದ ಯುವ ಕಾಂಗ್ರೆಸ್ ಕಾರ್ಯಕಾರಣಿ ಸಭೆ

ಮೈಸೂರು,ಫೆ.27:-   ಅಖಿಲ ಭಾರತ ಯುವ ಕಾಂಗ್ರೆಸ್ ಸಮಿತಿ ಮತ್ತು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ನಿರ್ದೇಶನದ ಮೇರೆಗೆ ಇಂದು ಮೈಸೂರಿನಲ್ಲಿ ‘ರಾಜ್ಯ ಮಟ್ಟದ ಯುವ ಕಾಂಗ್ರೆಸ್ ಕಾರ್ಯಕಾರಣಿ ಸಭೆ’ಯನ್ನು ಆಯೋಜನೆ ಮಾಡಲಾಗಿತ್ತು.

ಸಭೆಯನ್ನು ಮೈಸೂರು ನಗರ ಮತ್ತು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜನೆ ಮಾಡಲಾಗಿದ್ದು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಬಸನಗೌಡ ಬಾದರ್ಲಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ಎ.ಐ.ಸಿ.ಸಿ. ಜಂಟಿ ಕಾರ್ಯದರ್ಶಿಗಳು ಹಾಗೂ ಅಖಿಲ ಭಾರತ ಯುವ ಕಾಂಗ್ರೆಸ್ ಸಮಿತಿಯ ಉಸ್ತುವಾರಿಗಳಾದ   ಕೃಷ್ಣ ಆಳ್ವ, ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌ನ ಉಸ್ತುವಾರಿಗಳಾದ ರವೀಂದ್ರ ದಾಸ್   ಸಭೆಯಲ್ಲಿ ಉಪಸ್ಥಿತರಿದ್ದರು. ರಾಜ್ಯದ ಎಲ್ಲಾ ಜಿಲ್ಲೆಯ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರುಗಳು, ರಾಜ್ಯ ಉಪಾಧ್ಯಕ್ಷರುಗಳು ಮತ್ತು ರಾಜ್ಯ ಪದಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಇಂದಿರಾಗಾಂಧಿ ಕಾಂಗ್ರೆಸ್ ಭವನದಲ್ಲಿ   ಸಭೆ  ನಡೆದಿದ್ದು, ಮಾಜಿ ಸಚಿವರಾದ ಡಾ.ಹೆಚ್.ಸಿ. ಮಹದೇವಪ್ಪ  ಸಭೆಯನ್ನು ಉದ್ಘಾಟನೆ ಮಾಡಿದರು. ಮುಖ್ಯ ಅತಿಥಿಗಳಾಗಿ ಶಾಸಕರುಗಳಾದ ಡಾ.ಯತೀಂದ್ರ ಸಿದ್ದರಾಮಯ್ಯ, ಹೆಚ್.ಪಿ. ಮಂಜುನಾಥ್, ಅನಿಲ್ ಚಿಕ್ಕಮಾದು, ಪರಿಷತ್ ಸದಸ್ಯರಾದ ಆರ್.ಧರ್ಮಸೇನ, ಮಾಜಿ ಸಂಸದರಾದ ಆರ್.ಧೃವನಾರಾಯಣ್, ಮಾಜಿ ಶಾಸಕರಾದ ವಾಸು, ಎಂ.ಕೆ.ಸೋಮಶೇಖರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಡಾ.ಬಿ.ಜೆ. ವಿಜಯ್ ಕುಮಾರ್, ನಗರಾಧ್ಯಕ್ಷರಾದ ಆರ್.ಮೂರ್ತಿ ಹಾಗೂ ಕಾಂಗ್ರೆಸ್ ಮುಖಂಡರಾದ ಕೆ.ಹರೀಶ್‌ಗೌಡ, ಡಿ.ರವಿಶಂಕರ್ ಭಾಗವಹಿಸಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: