ಪ್ರಮುಖ ಸುದ್ದಿ

ದೆಹಲಿ ಹಿಂಸಾಚಾರ ಪ್ರಕರಣ : ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಗೆ ಮನವಿ ಸಲ್ಲಿಸಿದ ಕಾಂಗ್ರೆಸ್ ನಿಯೋಗ

ದೇಶ(ನವದೆಹಲಿ)ಫೆ.27:-   ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದ ಕಾಂಗ್ರೆಸ್ ನಿಯೋಗ ದೆಹಲಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿದೆ.

ಕೇಂದ್ರ ಸರ್ಕಾರವು ರಾಜಧರ್ಮವನ್ನು ಅನುಸರಿಸಲು ಮತ್ತು ಗೃಹ ಸಚಿವ ಅಮಿತ್ ಷಾ ಅವರನ್ನು ತೆಗೆದುಹಾಕಲು ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ಅಧ್ಯಕ್ಷ ಕೋವಿಂದ್ ಅವರಿಗೆ ಮನವಿ ಮಾಡಿತು.

ರಾಷ್ಟ್ರಪತಿಯನ್ನು ಭೇಟಿ ಮಾಡಲು ಪಕ್ಷದ ನಿಯೋಗದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಹಿರಿಯ ನಾಯಕರಾದ ಅಹ್ಮದ್ ಪಟೇಲ್, ಎ.ಕೆ ಆ್ಯಂಟನಿ, ಗುಲಾಮ್ ನಬಿ ಆಜಾದ್, ಮುಖ್ಯ ವಕ್ತಾರ ರಂದೀಪ್ ಸುರ್ಜೇವಾಲಾ, ಮಲ್ಲಿಕಾರ್ಜುನ್ ಖರ್ಗೆ ಇತರ ಕೆಲವು ನಾಯಕರು ಇದ್ದರು.

ಕಾಂಗ್ರೆಸ್ ಸಲ್ಲಿಸಿದ ಮನವಿ ಪತ್ರದಲ್ಲಿ, “ಹಿಂಸಾಚಾರವನ್ನು ತಡೆಯಲು ಗೃಹ ಸಚಿವರು ಅಸಮರ್ಥರು ಎಂದು ಸಾಬೀತಾದ ಕಾರಣ ಅವರನ್ನು ತೆಗೆದುಹಾಕಬೇಕು. ನಾಗರಿಕರ ಜೀವನ, ಆಸ್ತಿ ಮತ್ತು ಸ್ವಾತಂತ್ರ್ಯವನ್ನು ರಕ್ಷಿಸಬೇಕು ಎಂದು ಒತ್ತಾಯಿಸಿದ್ದು,  ನೀವು ನಿರ್ಣಾಯಕ ಹೆಜ್ಜೆ ಇಡುತ್ತೀರಿ ಎಂದು ನಾವು ಭಾವಿಸುತ್ತೇವೆ ಎಂದು ತಿಳಿಸಿದೆ. (ಏಜೆನ್ಸಿಸ್,ಎಸ್.ಎಚ್)

Leave a Reply

comments

Related Articles

error: