ಪ್ರಮುಖ ಸುದ್ದಿ

 ಕೆಂಪೇಗೌಡ ಏರ್ ಪೋರ್ಟ್ ಗೆ ಭೇಟಿ ನೀಡಿ ಕನ್ನಡ ಅನುಷ್ಠಾನ ಪರಿಶೀಲಿಸಿದ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ

ರಾಜ್ಯ(ಬೆಂಗಳೂರು)ಫೆ.27:-  ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರಾಜ್ಯ ಸರ್ಕಾರ ಜಾಗ ನೀಡುವ ಸಂದರ್ಭದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಬೇಕು ಎಂಬ ಷರತ್ತನ್ನು ವಿಧಿಸಿರುತ್ತದೆ. ಅದರನ್ವಯ ಕಾಲಮಿತಿಯೊಳಗೆ ಸರಿಪಡಿಸಿಕೊಂಡು ವರದಿ ನೀಡುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್. ನಾಗಾಭರಣ ಅವರು ಹೇಳಿದರು

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನಯಾನ ಸಂಸ್ಥೆಯಲ್ಲಿ ಹೊರರಾಜ್ಯದವರನ್ನು ಹೆ.ಆರ್ ಮುಖ್ಯಸ್ಥಗಳಾಗಿ ನೇಮಿಸಿಕೊಂಡಿದ್ದು, ಕೂಡಲೇ ಇವರನ್ನು ಬಿಡುಗಡೆಗೊಳಿಸಿ ಡಾ.ಸರೋಜಿನಿ ಮಹಿಷಿ ವರದಿಯನ್ವಯ ಶೇ. 100ರಷ್ಟು ಕನ್ನಡಿಗರನ್ನೇ ನೇಮಿಸಕೊಳ್ಳಬೇಕು ಎಂದು ತಿಳಿಸಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ  ವತಿಯಿಂದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನಯಾನ ಸಂಸ್ಥೆಗೆ ಭೇಟಿ ನೀಡಿ ಸಂಸ್ಥೆಯಲ್ಲಿ ಕನ್ನಡ ಅನುಷ್ಠಾನಗೊಳಿಸಿರುವ ಬಗ್ಗೆ ಪರಿಶೀಲನೆ ನಡೆಸಿ ಮಾತನಾಡಿದ ಅಧ್ಯಕ್ಷರು, 4 ಸಾವಿರ ಎಕರೆ ರೈತರ ಜಮೀನನ್ನು ರಾಜ್ಯ ಸರ್ಕಾರ ನಿಮಗೆ ನೀಡಿರುವುದು ಹೊರರಾಜ್ಯದವರನ್ನು ನೇಮಿಸಿಕೊಳ್ಳಲು ಅಥವಾ ಕೇವಲ ನಾಮಫಲಕಗಳ ಪ್ರದರ್ಶನಕ್ಕೆ ಅಲ್ಲ ಕನ್ನಡ ನೆಲದ ಮಕ್ಕಳಿಗೆ ಉದ್ಯೋಗ ದೊರೆಯಲಿ ಎಂಬ ಕಾರಣಕ್ಕೆ ಎಂಬುದನ್ನು ಮರೆಯಬಾರದು. ಇದು ರಾಜ್ಯ ಸರ್ಕಾರದ ನಿಯಮವನ್ನು ಉಲ್ಲಂಘಿಸಿದಂತಾಗುತ್ತದೆ. ಹಾಗಾಗಿ ಕೂಡಲೇ ಅವರನ್ನು ತೆರವುಗೊಳಿಸಿ ಕನ್ನಡಿಗರನ್ನು ನೇಮಿಸಿಕೊಳ್ಳಬೇಕು ಇಲ್ಲದಿದ್ದರೆ ಕ್ರಮವಹಿಸಲಾಗುವುದು ಎಂದು ಎಚ್ಚರಿಸಿದರು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಕೆ.ಮುರಳಿಧರ ಮಾತನಾಡಿ, ಈ ನೆಲದ ಮಕ್ಕಳಿಗೆ ಉದ್ಯೋಗ ಸಿಗಬೇಕು ಎನ್ನುವುದು ಈ ನೆಲದ ನೀತಿಯಾಗಿದೆ. ಅಭ್ಯರ್ಥಿಗಳ ಆಯ್ಕೆ ಸಂದರ್ಭದಲ್ಲಿ ಕನ್ನಡ ಪರೀಕ್ಷೆಗಳನ್ನು 10ನೇ ತರಗತಿ ಗುಣಮಟ್ಟದಲ್ಲಿ ನೆಡಸಬೇಕು ಎಂದರು

ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಡಾ.ವೀರಶೆಟ್ಟಿ, ಪ್ರಾಧಿಕಾರದ ಸದಸ್ಯರಾದ ಅಬ್ದುಲ್ ರೆಹಮಾನ್ ಪಾಷಾ, ಕೈಗಾರಿಕಾ ಸಂಘಗಳ ಒಕ್ಕೂಟದ ಕಾರ್ಯಾಧ್ಯಕ್ಷರಾದ ಸಿದ್ದಯ್ಯ, ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನಯಾನ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರಿಮರರ್, ಮುಖ್ಯ ಹಣಕಾಸು ಅಧಿಕಾರಿ ಭಾಸ್ಕರ್ ಆನಂದ್ ರಾವ್, ಸಾಮಾಜಿಕ ಕಾರ್ಯಗಳ ವಿಭಾಗದ ಮುಖ್ಯಸ್ಥರಾದ ಹೇಮಂತ್ ಮಾದೇಗೌಡ ಮತ್ತಿತರರು ಉಪಸ್ಥಿತರಿದ್ದರು. ನಿಲ್ದಾಣದ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.  (ಜಿ.ಕೆ,ಎಸ್.ಎಚ್)

Leave a Reply

comments

Related Articles

error: