ಪ್ರಮುಖ ಸುದ್ದಿ

ಸರ್ಕಾರಿ ಭೂಮಿ ಸಂರಕ್ಷಣಾ ಸಮಿತಿ ಸಭೆ : ನಾಲ್ಕು ಪ್ರಕರಣಗಳ ವಿರುದ್ಧ ತನಿಖೆಗೆ ಆದೇಶ

ರಾಜ್ಯ( ಮಡಿಕೇರಿ) ಜ.28 :- ಕರ್ನಾಟಕ ರಾಜ್ಯ ಸರ್ಕಾರಿ ಭೂಮಿ ಸಂರಕ್ಷಣಾ ಸಮಿತಿ ಅಧ್ಯಕ್ಷರಾದ ಕೆ.ಜಿ.ಬೋಪಯ್ಯ ಅವರ ಅಧ್ಯಕ್ಷತೆಯಲ್ಲಿ ಹಾಗೂ ಸಮಿತಿ ಸದಸ್ಯರಾದ ವಿಶ್ವನಾಥ್, ಅರಗ ಜ್ಞಾನೇಂದ್ರ, ರಾಜುಗೌಡ ಅವರ ಉಪಸ್ಥಿತಿಯಲ್ಲಿ ಗುರುವಾರ ಸಭೆ ನಡೆಯಿತು.
ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತರು, ಕಂದಾಯ, ನಗರಾಭಿವೃದ್ಧಿ, ಬೆಂಗಳೂರು ಅಭಿವದ್ಧಿ ಪ್ರಾಧಿಕಾರದ ಆಯುಕ್ತರು ಇತರರು ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸರ್ಕಾರಿ ಭೂಮಿ ಅತಿಕ್ರಮಣ ಸಂಬಂಧ ನಾಲ್ಕು ಪ್ರಕರಣ ಬಗ್ಗೆ ಕೂಡಲೇ ತನಿಖೆ ನಡೆಸಲು ಸಮಿತಿ ಸಭೆಯಲ್ಲಿ ನಿರ್ಧರಿಸಲಾಯಿತು. (ಕೆಸಿಐ,ಎಸ್.ಎಚ್)

Leave a Reply

comments

Related Articles

error: