ದೇಶಪ್ರಮುಖ ಸುದ್ದಿ

ಮಣಿಪುರವೂ ಬಿಜೆಪಿ ಹಿಡಿತಕ್ಕೆ : ಕಾಂಗ್ರೆಸ್‍ಗೆ ಇಲ್ಲೂ ತಪ್ಪಿತು ಅಧಿಕಾರ?

ಇಂಫಾಲ: ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಬಂದಿದ್ದ ಮಣಿಪುರದಲ್ಲಿ ಸರ್ಕಾರ ರಚಿಸಲು ಅಗತ್ಯವಿರುವಷ್ಟು ಶಾಸಕರ ಬೆಂಬಲ ಬಿಜೆಪಿಗೆ ಸಿಕ್ಕಿದೆ. 32 ಶಾಸಕರ ಬೆಂಬಲವಿರುವ ಪತ್ರವನ್ನು ರಾಜ್ಯಪಾಲರಿಗೆ ನೀಡಲಾಗಿದ್ದು, ಮಣಿಪುರದಲ್ಲೂ ಬಿಜೆಪಿ ಸರ್ಕಾರ ರಚಿಸುವುದು ಖಚಿತವಾಗಿದೆ.

60 ಕ್ಷೇತ್ರ ಬಲದ ಮಣಿಪುರ ವಿಧಾನಸಭೆಯಲ್ಲಿ ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತ ಲಭಿಸಿಲ್ಲ. ಬಿಜೆಪಿ 21 ಸ್ಥಾನಗಳಲ್ಲಿ ಜಯಗಳಿಸಿದ್ದು, ಸರ್ಕಾರ ರಚಿಸಲು 10 ಶಾಸಕರ ಬೆಂಬಲ ಅಗತ್ಯವಿತ್ತು.

ನ್ಯಾಷನಲ್ ಪೀಪಲ್ಸ್ ಪಕ್ಷ – ಎನ್‍.ಪಿ.ಪಿ.ಯ 4 ಶಾಸಕರು ಮತ್ತು ನಾಗಾ ಪೀಪಲ್ಸ್ ಫ್ರಂಟ್‍ನ 4 ಶಾಸಕರು, ಎಲ್‍ಜಿಪಿಯ ಓರ್ವ ಶಾಸಕ ಹಾಗೂ ಮೂವರು ಇತರ ಶಾಸಕರು ಬಿಜೆಪಿಗೆ ಬೆಂಬಲ ನೀಡಲು ಮುಂದೆ ಬಂದಿರುವುದರಿಂದ ಬಿಜೆಪಿಗೆ ಒಟ್ಟು 32 ಶಾಸಕರ ಬೆಂಬಲ ಸಿಕ್ಕಿದ್ದು, ಸರ್ಕಾರ ರಚನೆಯ ಹಾದಿ ಸುಗಮವಾಗಿದೆ.

ಕಾಂಗ್ರೆಸ್ ಪಕ್ಷ ಕೂಡ ಸರ್ಕಾರ ರಚನೆಗೆ ಪ್ರಯತ್ನ ನಡೆಸಿದ್ದು, ಮಾಜಿ ಸಿಎಂ ಇಬೋಬಿ ಸಿಂಗ್, ಅತಿ ಹೆಚ್ಚು ಸ್ಥಾನಗಳನ್ನು ಗಳಿಸಿರುವ ಕಾಂಗ್ರೆಸ್ ಪಕ್ಷವನ್ನು ಸರ್ಕಾರ ರಚನೆಗೆ ಮೊದಲು ಆಹ್ವಾನಿಸಬೇಕು ಎಂದು ಹೇಳಿದ್ದಾರೆ. ಆದರೆ ಕಾಂಗ್ರೆಸ್‍ನ ಓರ್ವ ಶಾಸಕ ಬಿಜೆಪಿ ಸರ್ಕಾರಕ್ಕೆ ಬೆಂಬಲ ಘೋಷಿಸಿದ್ದು, ಬಿಜೆಪಿಯೇ ಸರ್ಕಾರ ರಚಿಸುವ ಸಾಧ್ಯತೆಯೇ ಹೆಚ್ಚು.

(ಎನ್‍ಬಿಎನ್‍)

Leave a Reply

comments

Related Articles

error: