ಕರ್ನಾಟಕ

ಮಂಗಳೂರಿನಲ್ಲಿ ಗೋಡೆ ಕುಸಿದು ಇಬ್ಬರು ಕಾರ್ಮಿಕರ ಸಾವು

ಮಂಗಳೂರು,ಫೆ.28-ಕಂಪೌಂಡ್ ಕುಸಿದ ಪರಿಣಾಮ ನಿರ್ಮಾಣ ಹಂತದ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಮಂಗಳೂರಿನ ಕರಂಗಲಪಾಡಿ ಜಂಕ್ಷನ್ ನಲ್ಲಿ ನಡೆದಿದೆ.

ಬಾಗಲಕೋಟೆ ಮೂಲದ ಭೀಮೇಶ್ ಮತ್ತು ಬಂಗಾಳ ನಿವಾಸಿ ಮಸ್ರಿಕುಲ್ ಮೃತಪಟ್ಟವರು. ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದ ಕಟ್ಟಡ ಸಮೀಪದಲ್ಲಿದ್ದ ಕಂಪೌಂಡ್ ಏಕಾಏಕಿ ಕುಸಿದಿದೆ. ಈ ವೇಳೆ ಮೂವರು ಕಾರ್ಮಿಕರು ಬೃಹತ್ ಮಣ್ಣು ಮತ್ತು ಕಲ್ಲುಗಳ ರಾಶಿಯಲ್ಲಿ ಸಿಲುಕಿದ್ದರು. ಅವರಲ್ಲಿ ಇಬ್ಬರು ಮೃತಪಟ್ಟಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಗೊಂಡಿರುವ ಕಾರ್ಮಿಕನನ್ನು ಯೇನಪೋಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಣ್ಣಿನಡಿ ಇನ್ನಷ್ಟು ಕಾರ್ಮಿಕರು ಸಿಲುಕಿರುವ ಶಂಕೆ ಇದ್ದು ಪಾಂಡೇಶ್ವರ ಹಾಗೂ ಕದ್ರಿ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. (ಎಂ.ಎನ್)

 

Leave a Reply

comments

Related Articles

error: