
ಮೈಸೂರು
ತೋಟದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದು ಮಾರಾಟ : ವ್ಯಕ್ತಿಯ ಬಂಧನ
ಮೈಸೂರು,ಫೆ.29:- ತೋಟದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಘಟನೆ ಹುಣಸೂರಿನಲ್ಲಿ ನಡೆದಿದೆ.
ಬಂಧಿತನನ್ನು ಹುಣಸೂರು ತಾಲೂಕಿನ ಮಹದೇವಪುರ ಗ್ರಾಮದ ನಿವಾಸಿ ಸತೀಶ್(45)ಎಂದು ಹೇಳಲಾಗಿದೆ. ಈತ ತನ್ನ ಜಮೀನಿನಲ್ಲಿ ಗಾಂಜಾ ಬೆಳೆದು ಮಾರಾಟ ಮಾಡುತ್ತಿದ್ದ. ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಹುಣಸೂರು ಗ್ರಾಮಾಂತರ ಠಾಣೆಯ ಪೊಲೀಸರು ಈತನನ್ನು ಬಂಧಿಸಿ 600ಗ್ರಾಂ ಗಾಂಜಾ ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಸರ್ಕಲ್ ಇನ್ಸಪೆಕ್ಟರ್ ಪೂವಯ್ಯ ತಿಳಿಸಿದ್ದಾರೆ. (ಕೆ.ಎಸ್,ಎಸ್.ಎಚ್)