
ಮೈಸೂರು
ಡೆತ್ ನೋಟ್ ಬರೆದಿಟ್ಟು ಕಾರ್ಮಿಕ ನೇಣಿಗೆ ಶರಣು
ಮೈಸೂರು,ಫೆ.29:- ಮನೆಯಲ್ಲಿ ಯಾರೂ ಇಲ್ಲದ ವೇಳೆ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೋಗಾದಿಯ ಎಸ್ ಬಿಎಂ ಬಡಾವಣೆಯಲ್ಲಿ ನಡೆದಿದೆ.
ಮೃತನನ್ನು ಎಸ್ ಬಿ ಎಂ ಬಡಾವಣೆಯ ನಿವಾಸಿ ಹೊನ್ನಪ್ಪ(43)ಎಂದು ಗುರುತಿಸಲಾಗಿದೆ. ಇವರು ಮೇಟಗಳ್ಳಿಯ ಫ್ಯಾಕ್ಟರಿಯೊಂದರಲ್ಲಿ ಕಾರ್ಮಿಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇವರು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ತನ್ನ ಸಾವಿಗೆ ತನ್ನ ಸಹೋದ್ಯೋಗಿಗಳಾದ ಮಹೇಶ್, ಕಾರ್ತೀಕ ಅವರೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಸಾವನ್ನಪ್ಪಿದ್ದಾರೆ.
ಸರಸ್ವತಿಪುರಂ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಹೊನ್ನಪ್ಪ ಪತ್ನಿ ನೀಡಿರುವ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)