ಪ್ರಮುಖ ಸುದ್ದಿ

ರಸ್ತೆ ದುರಾವಸ್ಥೆ : ಕಾಮಗಾರಿ ತಕ್ಷಣ ಆರಂಭಿಸಲು ಒತ್ತಾಯ

ರಾಜ್ಯ( ಮಡಿಕೇರಿ) ಮಾ.2:- ಗುಡ್ಡೆಹೊಸೂರು, ಸಿದ್ದಾಪುರ ಮತ್ತು ನಂಜರಾಯಪಟ್ಟಣ, ವಾಲ್ನೂರು ಸಂಪರ್ಕ ರಸ್ತೆಯ ಅಭಿವೃದ್ಧಿಯ ಕನಸು ಕಾಣುತ್ತಿದ್ದ ಗ್ರಾಮಸ್ಥರಿಗೆ ಇದೀಗ ರಸ್ತೆ ದುರಾವಸ್ಥೆ ವ್ಯತಿರಿಕ್ತ ಪರಿಣಾಮವನ್ನು ಬೀರಿದೆ.
ಸುಮಾರು 17 ಕೋಟಿ ರೂ.ಗಳಲ್ಲಿ ಕಾಂಕ್ರಿಟ್ ರಸ್ತೆ ನಿರ್ಮಾಣಕ್ಕಾಗಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರು ಭೂಮಿ ಪೂಜೆ ನೆರವೇರಿಸಿದ ನಂತರ ಹಳೆಯ ರಸ್ತೆಯನ್ನು ಸಂಪೂರ್ಣವಾಗಿ ಅಗೆದು ಹಾಕಲಾಯಿತು. ಆದರೆ ರಸ್ತೆಯನ್ನು ಹದಗೆಡಿಸಿ ಹಲವು ದಿನಗಳೇ ಕಳೆದಿದ್ದರೂ ಕಾಮಗಾರಿ ಮಾತ್ರ ಆರಂಭಗೊಂಡಿಲ್ಲ. ಹೊಂಡ, ಗುಂಡಿಗಳಾಗಿರುವ ರಸ್ತೆ ಸಂಚಾರಕ್ಕೆ ಅಯೋಗ್ಯವಾಗಿದ್ದು, ದ್ವಿಚಕ್ರ ವಾಹನ ಚಾಲಕರು ಅನೇಕರು ಬಿದ್ದು ಗಾಯ ಮಾಡಿಕೊಂಡ ಘಟನೆಯೂ ನಡೆದಿದೆ.
ಗುಣಮಟ್ಟದ ಕಾಮಗಾರಿಯನ್ನು ತಕ್ಷಣ ಆರಂಭಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: