ಮೈಸೂರು

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ

ಮೈಸೂರು,ಮಾ.2:- ಕೇಂದ್ರ ಸರ್ಕಾರ ಬಜೆಟ್ ನಲ್ಲಿ ಕಾರ್ಮಿಕ ಸಂಘಟನೆಯನ್ನು ನಿರ್ಲಕ್ಷ್ಯಿಸಿದೆ ಎಂದು ಆರೋಪಿಸಿ, ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಿಐಟಿಯು ನೇತೃತ್ವದಲ್ಲಿ  ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು.

ಇಂದು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ಬಜೆಟ್ ಖಂಡಿಸಿದರು. ಕೇಂದ್ರದ ಬಜೆಟ್ ನಲ್ಲಿ ಕಾರ್ಮಿಕ ಸಂಘಟನೆಯನ್ನು ನಿರ್ಲಕ್ಷ್ಯಿಸಲಾಗಿದೆ. ರೈತ ವಿರೋಧಿ ಬಜೆಟ್ ಇದಾಗಿದೆ. ಇದೊಂದು ಕಾರ್ಪೋರೇಟ್ ಕಂಪನಿಗಳ ಓಲೈಕೆಯ ಬಜೆಟ್ ಆಗಿದೆ. ಕಾರ್ಮಿಕ ಸಂಘಟನೆಗಳ ಬೇಡಿಕೆ ಈಡೇರಿಸಲು ಗಮನ ನೀಡಿಲ್ಲ. ಇದೊಂದು ಜನವಿರೋಧಿ ಬಜೆಟ್ ಆಗಿದೆ. ಕನಿಷ್ಠ ಕೂಲಿ 21 ಸಾವಿರ ಆಗಬೇಕು. ಗುತ್ತಿಗೆ ಪದ್ಧತಿ ರದ್ದಾಗಬೇಕು, ಸ್ವಾಮಿನಾಥನ್ ಆಯೋಗದ ವರದಿ ಜಾರಿಗೊಳಿಸಬೇಕೆಂದು  ಒತ್ತಾಯಿಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: