ಮೈಸೂರು

ಶ್ರವಣ ನ್ಯೂನತೆಯ ಬಗ್ಗೆ ಸಮುದಾಯಕ್ಕೆ ಜಾಗೃತಿ ಮೂಡಿಸುವ ಜಾಥಾಕ್ಕೆ ಚಾಲನೆ

ಮೈಸೂರು,ಮಾ.3:- ಮೈಸೂರಿನ ತಿಲಕ್ ನಗರದಲ್ಲಿರುವ ಅಂಧ ಹಾಗೂ ಶ್ರವಣ ದೋಷವುಳ್ಳ ಮಕ್ಕಳ ಶಿಕ್ಷಕರ ತರಬೇತಿ ಕೇಂದ್ರದಲ್ಲಿ  ವಿಕಲ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖಾ ವತಿಯಿಂದ ವಿಶ್ವಶ್ರವಣ ದಿನದ ಪ್ರಯುಕ್ತ  ‘ಜೀವನಕ್ಕಾಗಿ ಕೇಳುವುದು, ಶ್ರವಣ ಹಾನಿಯು ನಿಮ್ಮನ್ನು ಮಿತಿಗೊಳಿಸಲು ಬಿಡಬೇಡಿ’ ಘೋಷವಾಕ್ಯದೊಂದಿಗೆ ಶ್ರವಣ ನ್ಯೂನತೆಯ ಬಗ್ಗೆ ಸಮುದಾಯಕ್ಕೆ ಜಾಗೃತಿ ಮೂಡಿಸುವ ಜಾಥಾವನ್ನಿಂದು ಹಮ್ಮಿಕೊಳ್ಳಲಾಗಿತ್ತು.

ಜಾಥಾಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಕೆ.ಪದ್ಮ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭ ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ತರಬೇತಿ ಕೇಂದ್ರದ ಉಪನಿರ್ದೇಶಕರಾದ ಮಂಜುಳ ವಿ.ಪಾಟೀಲ್, ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಮಮತ ಡಿ.ಜೆ, ಕಿವುಡು ಮಕ್ಕಳ ಪಾಠಶಾಲೆಯ ಅಧಿಕ್ಷಕರಾದ ಹರೀಶ್ ಮತ್ತಿತರರು ಉಪಸ್ಥಿತರಿದ್ದರು.

ಜಾಥಾದಲ್ಲಿ ತರಬೇತಿ ಕೇಂದ್ರದ ಪ್ರಶಿಕ್ಷಣಾರ್ಥಿಗಳು, ಸಿಬ್ಬಂದಿವರ್ಗದವರು, ಅಂಧ ಪಾಠಶಾಲೆಯ ವಿದ್ಯಾರ್ಥಿಗಳು, ಶ್ರವಣದೋಷವುಳ್ಳ ಶಾಲೆಯ ವಿದ್ಯಾರ್ಥಿಗಳು, ಜಿಲ್ಲಾ ಪುನರ್ವಸತಿ ಕೇಂದ್ರದ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: