ಮೈಸೂರು

ವಿಳಾಸ ಕೇಳುವ ನೆಪದಲ್ಲಿ ಚಿನ್ನದ ಸರ ಕಸಿದು ಪರಾರಿ

ವಿಳಾಸ ಕೇಳುವ ನೆಪದಲ್ಲಿ ವೃದ್ಧೆಯ ಚಿನ್ನದ ಸರವನ್ನು ಯಾರೋ ದುಷ್ಕರ್ಮಿಗಳು ಕಸಿದು ಪರಾರಿಯಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಬೃಂದಾವನ ಬಡಾವಣೆಯ ಯಶೋದಮ್ಮ (60) ಎಂಬವರೇ ಚಿನ್ನದ ಸರ ಕಳೆದುಕೊಂಡವರಾಗಿದ್ದಾರೆ. ಹೋಳಿ ಹಬ್ಬದ ಹಿನ್ನೆಲೆಯಲ್ಲಿ ಮುಖಕ್ಕೆ ಬಣ್ಣ ಬಳಿದುಕೊಂಡ  ಇಬ್ಬರು ದುಷ್ಕರ್ಮಿಗಳು ಯಶೋದಮ್ಮನವರ ಬಳಿ ಯಾರದೋ ವಿಳಾಸ ಕೇಳಿದ್ದಾರೆ. ಅವರು ಯಾರೆಂದು ಕೇಳುವಷ್ಟರಲ್ಲಿ ಅವರ ಕುತ್ತಿಗೆಯಲ್ಲಿದ್ದ 60ಗ್ರಾಂ ಚಿನ್ನದ ಸರ ಕಸಿದು ಪರಾರಿಯಾಗಿದ್ದಾರೆ ಎನ್ನಲಾಗಿದೆ. ವಿ.ವಿ.ಪುರಂ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವಿವಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಎಸ್.ಎನ್-ಎಸ್.ಎಚ್)

Leave a Reply

comments

Related Articles

error: