ಪ್ರಮುಖ ಸುದ್ದಿಮೈಸೂರು

ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ ಹೊಟ್ಟೆನೋವು :  ಆಸ್ಪತ್ರೆಗೆ ದಾಖಲು

ಮೈಸೂರು, ಮಾ.4:-  ಅನಾರೋಗ್ಯದ ಹಿನ್ನೆಲೆಯಲ್ಲಿ  ಚಲನಚಿತ್ರ ನಟ ದರ್ಶನ್‌ ನಗರದ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಗ್ಯಾಸ್ಟ್ರಿಕ್‌ ಸಮಸ್ಯೆಯಿಂದ ತೀವ್ರ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಒಂದು ದಿನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಮುಂಜಾನೆ 4ಗಂಟೆಗೆ ದರ್ಶನ್‌ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊಲಂಬಿಯಾ ಏಷ್ಯಾ ಆಸ್ಪತ್ರೆಯ ವೈದ್ಯರಾದ ಡಾ.ಅನೂಪ್ ಆಳ್ವಾ ಅವರು ದರ್ಶನ್ ಗೆ ಚಿಕಿತ್ಸೆ ನೀಡಿದ್ದಾರೆ.  ದರ್ಶನ್‌ ಅಭಿಮಾನಿಗಳು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸುತ್ತಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: