ಕರ್ನಾಟಕಪ್ರಮುಖ ಸುದ್ದಿ

ಪುರಸಭೆಯ ಸದಸ್ಯನ ಕೊಲೆ

ಆನೇಕಲ್ ನ ಹೊಸೂರು ಮುಖ್ಯ ರಸ್ತೆಯ ಬಿಟಿಎಲ್ ಕಾಲೇಜು ಬಳಿ ಪುರಸಭೆ ಸದಸ್ಯರೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆಗೈದಿದ್ದಾರೆ.

ಕೊಲೆಯಾದ ವ್ಯಕ್ತಿಯನ್ನು ಆನೇಕಲ್ ತಾಲೂಕಿನ ಬೊಮ್ಮಸಂದ್ರ ಪುರಸಭೆಯ ಬಿಜೆಪಿ ಸದಸ್ಯ ಕಿತ್ತಗಾನಹಳ್ಳಿ ನಿವಾಸಿ ಶ್ರೀನಿವಾಸ್  ಎಂದು ಗುರುತಿಸಲಾಗಿದೆ.

ಮಂಗಳವಾರ ಮುಂಜಾನೆ 5 ಗಂಟೆ ಸುಮಾರಿಗೆ ಕಾರಿನಲ್ಲಿ ತೆರಳುವಾಗ ಅಡ್ಡಗಟ್ಟಿದ ದುಷ್ಕರ್ಮಿಗಳು ಲಾಂಗು ಮಚ್ಚುಗಳಿಂದ ಹಲ್ಲೆ ನಡೆಸಿ ಹತ್ಯೆಗೈದಿದ್ದಾರೆ ಎನ್ನಲಾಗಿದೆ. ಕೊಲೆಯಾದ ವಾಸು ಪತ್ನಿ ಜಿಲ್ಲಾ ಪಂಚಾಯತ್ ಸದಸ್ಯೆಯಾಗಿದ್ದಾರೆ ಎಂದು ತಿಳಿದುಬಂದಿದೆ. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: