ಪ್ರಮುಖ ಸುದ್ದಿ

ಕಂದಾಯ ಅಧಿಕಾರಿಗಳ ಸಭೆ ತಾಲೂಕು ಮಟ್ಟದಲ್ಲಿಯೂ ನಡೆಸಿ : ಜಿಲ್ಲಾಧಿಕಾರಿ ನಿರ್ದೇಶನ

ರಾಜ್ಯ(ಮಡಿಕೇರಿ)ಮಾ.6 : – ಕಂದಾಯ ಅಧಿಕಾರಿಗಳ ಸಭೆಯನ್ನು ತಾಲ್ಲೂಕು ಮಟ್ಟದಲ್ಲಿಯೂ ತಹಶೀಲ್ದಾರ್ ಅವರ ನೇತೃತ್ವದಲ್ಲಿ ಸಭೆ ನಡೆಸುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ನಿರ್ದೇಶನ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ   ನಡೆದ ಕಂದಾಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲಾ ಮಟ್ಟದ ಕಂದಾಯಾಧಿಕಾರಿಗಳ ಸಭೆಯಲ್ಲಿ ಸರಿಯಾದ ಮತ್ತು ಸಮರ್ಪಕ ಮಾಹಿತಿ ನೀಡುವ ನಿಟ್ಟಿನಲ್ಲಿ ತಾಲ್ಲೂಕು ಮಟ್ಟದಲ್ಲಿಯೂ ತಹಶೀಲ್ದಾರರು, ತಾ.ಪಂ.ಇಒ.ಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಕಂದಾಯ ನಿರೀಕ್ಷಕರ ಉಪ ಸ್ಥಿತಿಯಲ್ಲಿ ಸಭೆ ನಡೆಸಿ ಜಿಲ್ಲಾ ಮಟ್ಟದ ಕಂದಾಯಾಧಿಕಾರಿಗಳ ಸಭೆಯಲ್ಲಿ ತಹಶೀಲ್ದಾರರೇ ಮಾಹಿತಿ ನೀಡುವಂತಾಗಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದರು.

ಜಿಲ್ಲೆಯ ವಿವಿಧ ಗ್ರಾ.ಪಂ.ವ್ಯಾಪ್ತಿಯಲ್ಲಿ ಕಸ ವಿಲೇವಾರಿ, ಸ್ಮಶಾನ, ನಿವೇಶನ, ವಿದ್ಯಾರ್ಥಿ ನಿಲಯ ಹಾಗೂ ಸಮುದಾಯ ಭವನಗಳಿಗೆ ಭೂಮಿ ಹಂಚಿಕೆ ಸಂಬಂಧಿಸಿದಂತೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

ತಾಲೂಕುವಾರು ಗ್ರಾಮ ಪಂಚಾಯಿತಿಗಳಲ್ಲಿ ನಿವೇಶನಕ್ಕಾಗಿ ಲಭ್ಯವಿರುವ ಜಮೀನಿನ ವಿವರಗಳ ಮಾಹಿತಿಯನ್ನು ಜಿಲ್ಲಾಧಿಕಾರಿ ಅವರು ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಗ್ರಾ.ಪಂ.ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಸರ್ಕಾರಿ ನಿವೇಶನ ಒತ್ತುವರಿಯಾಗಿದ್ದರೆ, ಸಂಬಂಧಪಟ್ಟ ಪಂಚಾಯಿತಿ ಅಥವಾ ತಾ.ಪಂ.ಗಳಿಂದಲೇ ತೆರವು ಕಾರ್ಯ ಆಗಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದರು.

ಅಭ್ಯತ್‍ಮಂಗಲ ವ್ಯಾಪ್ತಿಯಲ್ಲಿ ಶೀಘ್ರವೇ ಬಾಕಿ ಇರುವ ಕಾರ್ಯಗಳನ್ನು ಮುಗಿಸಿ ನಿವೇಶನ ಹಸ್ತಾಂತರಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಅನೀಸ್ ಕಣ್ಮಣಿ ಜಾಯ್ ಅವರು ನಿರ್ದೇಶನ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸಿ.ವಿ.ಸ್ನೇಹ ಅವರು ಈಗಾಗಲೇ ಕಸ ವಿಲೇವಾರಿಗೆ ಸಂಬಂಧಿಸಿದಂತೆ 43 ಕಡೆಗಳಲ್ಲಿ ಜಾಗ ನೀಡಲಾಗಿದೆ. ಆದರೆ ಡಿಪಿಆರ್ ಆಗಿಲ್ಲ ಎಂಬ ಮಾಹಿತಿ ಇದ್ದು, ಈ ಸಂಬಂಧ ಅಗತ್ಯ ಕ್ರಮ ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಉಪ ವಿಭಾಗಾಧಿಕಾರಿ ಟಿ.ಜವರೇಗೌಡ ಅವರು ನಿವೇಶನ ಹಂಚಿಕೆಗೆ ಭೂಮಿ, ಕಸ ವಿಲೇವಾರಿಗೆ ಭೂಮಿ ಸಂಬಂಧಿಸಿದಂತೆ ಹಲವು ಮಾಹಿತಿ ನೀಡಿದರು.

ಭೂ ದಾಖಲೆಗಳ ಉಪ ನಿರ್ದೇಶಕರಾದ ಶ್ರೀನಿವಾಸ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಭಾರತಿ, ಪಶುಪಾಲನಾ ಇಲಾಖೆ ಉಪ ನಿರ್ದೇಶಕರಾದ ತಮ್ಮಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಅರುಂಧತಿ, ತಹಶೀಲ್ದಾರ್ ಮಹೇಶ್, ಗೋವಿಂದರಾಜು, ತಾ.ಪಂ.ಇಒಗಳಾದ ಲಕ್ಷ್ಮೀ, ಸುನಿಲ್ ಕುಮಾರ್, ಷಣ್ಮುಗಂ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ರಾಜು, ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರಾದ ದೇವಕಿ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಘವೇಂದ್ರ, ನಾನಾ ಇಲಾಖೆ ಅಧಿಕಾರಿಗಳು ಇತರರು ಹಾಜರಿದ್ದರು.  (ಕೆಸಿಐ,ಎಸ್.ಎಚ್)

Leave a Reply

comments

Related Articles

error: