ಮೈಸೂರು

ಸುನಿಲ್ ಬೋಸ್ ವಿಚಾರಣೆ ಮಾ.21ಕ್ಕೆ ಮುಂದೂಡಿಕೆ

ಅಕ್ರಮ ಮರಳುಗಾರಿಕೆಗೆ ಪರವಾನಗಿ ನೀಡಲು ಲಂಚ ಪಡೆಯುವಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗೆ ಲಂಚ ಪಡೆಯಲು ಪ್ರೇರೇಪಣೆ ನೀಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಸಚಿವ ಡಾ. ಎಚ್.ಸಿ ಮಹದೇವಪ್ಪನವರ ಪುತ್ರ ಸುನಿಲ್ ಬೋಸ್  ವಿಚಾರಣೆಯನ್ನು ಮೂರನೇ ಜೆ.ಎಂ.ಎಫ್.ಸಿ ನ್ಯಾಯಾಲಯ ಮಾ.21ಕ್ಕೆ ಮುಂದೂಡಿದೆ.

ಫೆ.27ರಂದು  ಸುನಿಲ್ ಬೋಸ್ ಖುದ್ದು ಹಾಜರಾಗುವಂತೆ ಈ ಹಿಂದೆಯೇ ನ್ಯಾಯಾಲಯ ಆದೇಶಿಸಿತ್ತು. ಆದರೆ ದೂರುದಾರ ರಾಜು ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಮತ್ತೆ ವಿಚಾರಣೆಯನ್ನು ಮಾ.6 ಕ್ಕೆ ಮೂರನೇ ಜೆ.ಎಂ.ಎಫ್.ಸಿ ನ್ಯಾಯಾಲಯ ಮುಂದೂಡಿತ್ತು. ಫೆ.20ರಂದು ಸುನಿಲ್ ಬೋಸ್ ಪರ ವಕೀಲರು ಖುದ್ದು ಹಾಜರಾತಿಗೆ ವಿನಾಯಿತಿ ನೀಡಬೇಕು ಎಂದು ಕೇಳಿಕೊಂಡಿದ್ದರು. ಪ್ರಕರಣದಲ್ಲಿ ಸುನಿಲ್ ಬೋಸ್ ವಿರುದ್ಧ ಸೂಕ್ತ  ಸಾಕ್ಷ್ಯಾಧಾರಗಳು  ಇಲ್ಲದ್ದರಿಂದ ಸುನಿಲ್ ಬೋಸ್ ಹೆಸರನ್ನು ಕೈ ಬಿಡುವಂತೆ ನ್ಯಾಯಾಲಯದಲ್ಲಿ ಅರ್ಜಿಯನ್ನು ಸಲ್ಲಿಸಲಾಗಿತ್ತು. ಆದರೆ ಸದರಿ ಪ್ರಕರಣದಲ್ಲಿ ಸುನಿಲ್ ಬೋಸ್ ಹೆಸರು ಕೈಬಿಡಲು ನಿರಾಕರಿಸಿರುವ ನ್ಯಾಯಾಲಯ ಫೆ.27 ರಂದು ಖುದ್ದು ಹಾಜರಾಜಬೇಕೆಂದು ಆದೇಶ ನೀಡಿತ್ತು. ಮಾ.6ಕ್ಕೆ ಹಾಜರಾಗುವಂತೆ ಆದೇಶಿಸಿತ್ತು.  ಮತ್ತೆ  ಮಾ. 14 ಕ್ಕೆ ವಿಚಾರಣೆ ಮುಂದೂಡಲಾಗಿತ್ತು. ಮಾ.14ರಂದು ಸುನಿಲ್ ಬೋಸ್ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಆದರೆ ನ್ಯಾಯಾಲಯ ವಿಚಾರಣೆಯನ್ನು ಮಾ.21ಕ್ಕೆ ಮುಂದೂಡಿದೆ. (ಕೆ.ಎಸ್-ಎಸ್.ಎನ್)

Leave a Reply

comments

Related Articles

error: