ದೇಶಪ್ರಮುಖ ಸುದ್ದಿ

ನಟಿ ಜಯಪ್ರದಾಗೆ ಜಾಮೀನು ರಹಿತ ವಾರೆಂಟ್ ಜಾರಿ

ರಾಮ್​ಪುರ,(ಉತ್ತರಪ್ರದೇಶ),ಮಾ.7-ಹಿರಿಯ ನಟಿ ಹಾಗೂ ಬಿಜೆಪಿ ನಾಯಕಿ ಜಯಪ್ರದಾ ವಿರುದ್ಧ ಉತ್ತರಪ್ರದೇಶದ ನ್ಯಾಯಾಲಯ ಇಂದು ಜಾಮೀನು ರಹಿತ ವಾರೆಂಟ್ ಹೊರಡಿಸಿದೆ.

ಕಳೆದ ವರ್ಷ ನಡೆದ ಲೋಕಸಭಾ ಚುನಾವಣೆ ವೇಳೆ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಲ್ಲಿ ವಾರೆಂಟ್ ಜಾರಿಯಾಗಿದೆ. ಲೋಕಸಭಾ ಚುನಾವಣೆಯಲ್ಲಿ ಜಯಪ್ರದಾ ಉತ್ತರ ಪ್ರದೇಶದ ರಾಮ್​ಪುರ ಕ್ಷೇತ್ರದಿಂದ ಕಣಕ್ಕಿಳಿದಿದ್ದರು. ಈ ವೇಳೆ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ದೂರು ದಾಖಲಾಗಿತ್ತು.

ಇದೀಗ ವಾರೆಂಟ್​ ಹೊರಡಿಸಿದ್ದು, ಪ್ರಕರಣದ ಮುಂದಿನ ವಿಚಾರಣೆ ಏಪ್ರಿಲ್​ 20ಕ್ಕೆ ನಡೆಯಲಿದೆ. ಚುನಾವಣೆಯಲ್ಲಿ ಜಯಪ್ರದಾ ಅವರು ಸಮಾಜವಾದಿ ಪಕ್ಷದ ಪ್ರತಿಸ್ಪರ್ಧಿ ಅಜಂ ಖಾನ್​ ವಿರುದ್ಧ ಸುಮಾರು 1 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಹೀನಾಯ ಸೋಲನ್ನು ಅನುಭವಿಸಿದ್ದಾರೆ. (ಎಂ.ಎನ್)

 

Leave a Reply

comments

Related Articles

error: