ಕರ್ನಾಟಕಪ್ರಮುಖ ಸುದ್ದಿ

ಅಂಡಮಾನ್ ನಿಕೋಬಾರ್ ದ್ವೀಪಗಳಲ್ಲಿ ಪ್ರಬಲ ಭೂಕಂಪನ

ಪೋರ್ಟ್​ಬ್ಲೇರ್ : ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದಲ್ಲಿ ಪ್ರಬಲ ಭೂಕಂಪನ ಸಂಭವಿಸಿದೆ. ಮಂಗಳವಾರ ಬೆಳಗ್ಗೆ ಸಂಭವಿಸಿದ ಕಂಪನವು ರಿಕ್ಟರ್ ಮಾಪಕದಲ್ಲಿ 5.9 ರಷ್ಟು ತೀವ್ರತೆ ದಾಖಲಿಸಿದೆ.

ನಿಕೋಬಾರ್ ದ್ವೀಪ ಸಮೂಹದ ಭೂಗರ್ಭದ ಸುಮಾರು 10 ಕಿ.ಮೀ. ಆಳದಲ್ಲಿ ಭೂಕಂಪನದ ಕೇಂದ್ರ ಬಿಂದು ದಾಖಲಾಗಿದ್ದು, ಮಂಗಳವಾರ ಬೆಳಗ್ಗೆ 8.21ರ ಸುಮಾರಿಗೆ ಸಂಭವಿಸಿರುವ ಭೂಕಂಪನ ಪ್ರಬಲವೇ ಆಗಿದ್ದರೂ ಸುನಾಮಿ ಅಲೆಗಳನ್ನು ಸೃಷ್ಟಿಸುವಷ್ಟು ಪ್ರಬಲವಲ್ಲ. ಹೀಗಾಗಿ ಸುನಾಮಿ ಏಳುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.

ಇನ್ನು ಭೂಕಂಪನದಿಂದಾಗಿ ಜೀವಹಾನಿ ಮತ್ತು ಆಸ್ತಿಗಳಿಗೆ ಹಾನಿಯಾಗಿರುವ ಕುರಿತು ಈವರೆಗೂ ಯಾವುದೇ ಮಾಹಿತಿ ದೊರೆತಿಲ್ಲ. ಅಧಿಕಾರಿಗಳು ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ ಎಂದು ತಿಳಿದುಬಂದಿದೆ. ಇದೇ ವೇಳೆ ಮಂಗಳವಾರ ಬೆಳಗ್ಗೆ 5.48ರ ಸುಮಾರಿಗೆ ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲೂ ಲಘು ಪ್ರಮಾಣದ ಅಂದರೆ 3.6ರಷ್ಟು ತೀವ್ರತೆಯ ಭೂಕಂಪನ ಸಂಭವಿಸಿತ್ತು. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.

(ಎನ್‍.ಬಿ.ಎನ್)

Leave a Reply

comments

Related Articles

error: