ಪ್ರಮುಖ ಸುದ್ದಿ

ಮಹಾ ಸಿಎಂ ಉದ್ಧವ್ ಠಾಕ್ರೆ ಅಯೋಧ್ಯೆಗೆ ಆಗಮನ : ದೇವಾಲಯ ನಿರ್ಮಾಣಕ್ಕೆ 1 ಕೋಟಿ ರೂ.ನೀಡುವುದಾಗಿ ಘೋಷಣೆ

ದೇಶ(ನವದೆಹಲಿ)ಮಾ.7:-  ರಾಮಲಲ್ಲಾರನ್ನು ದರ್ಶನ ಪಡೆಯಲು ಇಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅಯೋಧ್ಯೆಯನ್ನು ತಲುಪಿದ್ದಾರೆ.

ಅವರು ಅಲ್ಲಿಗೆ ತಲುಪಿದ ಕೂಡಲೇ ಅವರನ್ನು ಶಿವ ಸೇನೆಯ ಪ್ರಮುಖರು ಸ್ವಾಗತಿಸಿದ್ದಾರೆ. ಪ್ರಸ್ತುತ, ಠಾಕ್ರೆ ಮಾಧ್ಯಮಗಳೊಂದಿಗೆ ಸಂವಹನ ನಡೆಸುತ್ತಿದ್ದಾರೆ. ಈ ಸಮಯದಲ್ಲಿ ಮಾತನಾಡಿದ ಅವರು ನಾನು ಕಳೆದ ಒಂದೂವರೆ ವರ್ಷದಲ್ಲಿ ಮೂರು ಬಾರಿ ಅಯೋಧ್ಯೆಗೆ ಬಂದಿದ್ದೇನೆ. ನಾನು ಇಲ್ಲಿಗೆ ಬಂದಾಗ ಕನಸಿನಲ್ಲಿಯೂ ನಾನು ಮುಖ್ಯಮಂತ್ರಿಯಾಗುತ್ತೇನೆಂದು ಊಹಿಸಿರಲಿಲ್ಲ ಎಂದಿದ್ದಾರೆ.

ನಾನು ಮತ್ತೆ ಮತ್ತೆ ಇಲ್ಲಿಗೆ ಬರುತ್ತೇನೆ ಮತ್ತು ಒಂದೂವರೆ ವರ್ಷದಲ್ಲಿ ನಾನು ಮೂರನೇ ಬಾರಿಗೆ ಅಯೋಧ್ಯೆಗೆ ಬಂದಿದ್ದೇನೆ ಎಂದಿದ್ದಾರೆ.   ಕೊರೋನಾ ವೈರಸ್ ಕಾರಣದಿಂದ ಅವರು ಸರಯೂ ಆರತಿಗೆ ಸೇರಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ ದೇವಾಲಯದ ನಿರ್ಮಾಣಕ್ಕಾಗಿ ಒಂದು ಕೋಟಿ ರೂಪಾಯಿ ನೀಡುವುದಾಗಿ ಹೇಳಿದ್ದಾರೆ.

ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದ ಅಧಿಕಾರಾವಧಿಯ 100 ದಿನಗಳನ್ನು ಪೂರೈಸಿದ ನಂತರ ಉದ್ಧವ್ ಠಾಕ್ರೆ ಅಯೋಧ್ಯ ರಾಮ್ ದೇವಸ್ಥಾನಕ್ಕೆ ಭೇಟಿ ನೀಡಿದರು. ಸಿಎಂ ಆದ ನಂತರ ಉದ್ಧವ್ ಅಯೋಧ್ಯೆಗೆ ಮಾಡಿದ ಮೊದಲ ಭೇಟಿ ಇದಾಗಿದೆ. ಅಷ್ಟೇ ಅಲ್ಲ, ಬಿಜೆಪಿ ಮತ್ತು ಎನ್‌ಡಿಎ ಮೈತ್ರಿಯೊಂದಿಗಿನ ಸಂಬಂಧವನ್ನು ಮುರಿದ ನಂತರವೂ ಉದ್ಧವ್ ಮೊದಲ ಬಾರಿಗೆ ಅಯೋಧ್ಯೆಗೆ ಹೋಗುತ್ತಿದ್ದಾರೆ. (ಏಜೆನ್ಸಿಸ್,ಎಸ್.ಎಚ್)

Leave a Reply

comments

Related Articles

error: