ಪ್ರಮುಖ ಸುದ್ದಿ

ಬಹುಮಹಡಿ ಮನೆಗಳ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ

ರಾಜ್ಯ(ಬೆಂಗಳೂರು)ಮಾ.9:- ಮುಖ್ಯಮಂತ್ರಿ   ಬಿ ಎಸ್ ಯಡಿಯೂರಪ್ಪ ಅವರು, ರಾಜೀವ್ ಗಾಂಧಿ ನಿಗಮದ ವತಿಯಿಂದ ಆಯೋಜಿಸಿದ್ದ ‘1 ಲಕ್ಷ ಬಹುಮಹಡಿ ಬೆಂಗಳೂರು ವಸತಿ ಯೋಜನೆ’ಯಡಿ ದಾಸರಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗಾಣಿಗರಹಳ್ಳಿ ಸರ್ವೇ ನಂ. 74ರಲ್ಲಿ 932 ಬಹುಮಹಡಿ ಮನೆಗಳ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು.

ಈ ಸಂದರ್ಭ ವಸತಿ ಸಚಿವ ವಿ ಸೋಮಣ್ಣ, ಕಂದಾಯ ಸಚಿವ ಆರ್ ಅಶೋಕ್, ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಸದಾನಂದ ಗೌಡ, ಶಾಸಕ ಆರ್ ಮಂಜುನಾಥ್ ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: