ಮೈಸೂರು

ಮಹಿಳೆಯ ಕತ್ತಿನಲ್ಲಿದ್ದ ಮಾಂಗಲ್ಯ ಸರ ಎಗರಿಸಿ ಪರಾರಿ

ಮೈಸೂರು,ಮಾ.9:- ಮಹಿಳೆಯೋರ್ವರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ದ್ವಿಚಕ್ರವಾಹನದಲ್ಲಿ ಬಂದ ದುಷ್ಕರ್ಮಿಗಳು ಮಹಿಳೆಯೋರ್ವರ ಕುತ್ತಿಗೆಯಲ್ಲಿದ್ದ ಚಿನ್ನದ ಮಾಂಗಲ್ಯ ಸರವನ್ನು ಎಗರಿಸಿ ಪರಾರಿಯಾದ ಘಟನೆ ರಾಘವೇಂದ್ರ ಮಠದ ಹಿಂಭಾಗದ ರಸ್ತೆಯಲ್ಲಿ ನಡೆದಿದೆ.

ಲೀಲಾವತಿ ಎಂಬವರೇ ಚಿನ್ನದ ಸರ ಕಳೆದುಕೊಂಡವರಾಗಿದ್ದು, ಈ ಕುರಿತು ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅವರು 07-03-2020  ರಂದು ರಾತ್ರಿ  7.30 ರ ಸಮಯದಲ್ಲಿ  ತಮ್ಮ ಮನೆಯಿಂದ ಮೊಸರು ತರಲು ರಾಘವೇಂದ್ರ ಮಠದ ಹಿಂಭಾಗದ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಎದುರುಗಡೆಯಿಂದ 20-25 ವರ್ಷದ ಇಬ್ಬರೂ ವ್ಯಕ್ತಿಗಳು ಬೈಕಿನಲ್ಲಿ ಬಂದಿದ್ದು, ಬೈಕಿನ ಹಿಂಭಾಗದಲ್ಲಿ ಕುಳಿತಿದ್ದವನು ಅವರ ಕತ್ತಿನಲ್ಲಿದ್ದ ಸುಮಾರು 60,000 ರೂ. ಮೌಲ್ಯದ 30 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಹೋಗಿದ್ದಾನೆಂದು ದೂರಿನಲ್ಲಿ ತಿಳಿಸಿದ್ದಾರೆ.

ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: