ಕರ್ನಾಟಕಪ್ರಮುಖ ಸುದ್ದಿ

ರಾಜ್ಯದಲ್ಲಿ ಕೊರೊನಾ ವೈರಸ್ ಪತ್ತೆ: ಆರೋಗ್ಯ ಇಲಾಖೆಯಿಂದ ಮಾಹಿತಿ ಪಡೆದ ಸಿಎಂ ಯಡಿಯೂರಪ್ಪ

ಬೆಂಗಳೂರು,ಮಾ.10-ರಾಜ್ಯದಲ್ಲಿ ಮೊದಲ ಕೊರೊನಾ ವೈರಸ್ ಪ್ರಕರಣ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.

ಹಿರಿಯ ಅಧಿಕಾರಿಗಳ ಜೊತೆಗೆ ಫೋನ್‌ನಲ್ಲಿ ಮಾತುಕತೆ ನಡೆಸಿದ ಸಿಎಂ, ಕೊರೊನಾ ತಡೆಗಟ್ಟುವಲ್ಲಿ ಕೈಗೊಂಡಿರುವ ಮುನ್ನೆಚ್ಚರಿಕಾ ಕ್ರಮಗಳ ಕುರಿತಾಗಿ ಮಾಹಿತಿ ಸಂಗ್ರಹಿಸಿದ್ದಾರೆ. ಅಲ್ಲದೆ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಕೈಗೊಂಡಿರುವ ಮುನ್ನೆಚ್ಚರಿಕೆಯ ಕ್ರಮಗಳ ಮಾಹಿತಿಯನ್ನು ಪಡೆದುಕೊಂಡರು.

ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿರುವ ಬಿಎಸ್ವೈ, ಸರ್ಕಾರದಿಂದ ಎಲ್ಲಾ ರೀತಿಯ ನೆರವುಗಳನ್ನು ನೀಡಲು ಸಿದ್ಧ ಎಂದಿದ್ದಾರೆ. ಜೊತೆಗೆ ಐಟಿ, ಬಿಟಿ ಕಂಪನಿಗಳು ಇರುವ ಕಡೆಗಳಲ್ಲಿ ಹೆಚ್ಚಿನ ಗಮನ ನೀಡುವಂತೆ ಸೂಚಿಸಿದ್ದಾರೆ.

ಅಮೆರಿಕಾದಿಂದ ಬೆಂಗಳೂರಿಗೆ ಹಿಂತಿರುಗಿದ ಟೆಕ್ಕಿಯಲ್ಲಿ ಕೊರೊನಾ ವೈರಸ್ ಪತ್ತೆಯಾಗಿದೆ. ಇದು ರಾಜ್ಯದಲ್ಲಿ ಪತ್ತೆಯಾದ ಮೊದಲ ಪ್ರಕರಣವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೆಚ್ಚಿನ ಮುತುವರ್ಜಿ ವಹಿಸಿದೆ. ಮುಂಜಾಗರೂಕತಾ ಕ್ರಮವಾಗಿ ಬೆಂಗಳೂರಿನ ಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ. ದೇಶದಲ್ಲಿ 44 ಕೊರೊನಾ ಪ್ರಕರಣಗಳು ಪತ್ತೆಯಾಗಿದೆ. (ಎಂ.ಎನ್)

Leave a Reply

comments

Related Articles

error: