ಪ್ರಮುಖ ಸುದ್ದಿಮನರಂಜನೆ

ಕೊರೊನಾ ಎಫೆಕ್ಟ್ ಹಿನ್ನೆಲೆ : ನಟ ನಿಖಿಲ್ ಕುಮಾರಸ್ವಾಮಿ ವಿವಾಹ ರಾಮನಗರದಿಂದ ಬೆಂಗಳೂರು ಅರಮನೆ ಮೈದಾನಕ್ಕೆ ಶಿಫ್ಟ್ !?

ರಾಜ್ಯ(ಬೆಂಗಳೂರು)ಮಾ.11:-  ಜೆಡಿಎಸ್ ನಾಯಕ, ನಟ ನಿಖಿಲ್ ಕುಮಾರಸ್ವಾಮಿ ಅವರ ಮದುವೆಯನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಸಲು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಯವರ ಕುಟುಂಬ ತೀರ್ಮಾನಿಸಿದೆ ಎನ್ನಲಾಗಿದೆ.

ಕೊರೊನಾ ಎಫೆಕ್ಟ್ ಹಿನ್ನೆಲೆಯಲ್ಲಿ ರಾಮನಗರದ ಜಾನಪದ ಲೋಕದಲ್ಲಿ ಆಯೋಜಿಸಿದ್ದ ಮದುವೆಯನ್ನು  ಸ್ಥಳಾಂತರಿಸಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ರಾಮನಗರದ ಸುಮಾರು 60 ಎಕರೆ ಜಮೀನಿನಲ್ಲಿ ಈಗಾಗಲೇ ಸಿದ್ಧತೆ ನಡೆದಿತ್ತು. ಜಾನಪದ ಲೋಕದ ಜಮೀನಿನಲ್ಲಿ ಈಗಾಗಲೇ 6 ಕೊಳವೆಬಾವಿ ಕೊರೆಸಲಾಗಿತ್ತು ಆದರೆ ಕೊರೊನಾ ಭೀತಿಯಿಂದ ಸ್ಥಳ ಬದಲಾವಣೆ ಮಾಡುವ ಸಂಭವ ಇದೆ.

ದೇವೆಗೌಡ ಅವರೊಂದಿಗೆ ಕುಮಾರಸ್ವಾಮಿ ಅವರು ಚರ್ಚಿಸಿ ಈ ತೀರ್ಮಾನಕ್ಕೆ ಬಂದಿದ್ದಾರಂತೆ. ಈ ಬಗ್ಗೆ ಅಧಿಕೃತ ಹೇಳಿಕೆ ಇನ್ನಷ್ಟೇ ಹೊರಬೀಳಬೇಕಿದೆ. ಈಗ ಅಚಾನಕ್ಕಾಗಿ ಕುಟುಂಬ ಸ್ಥಳ ಬದಲಾವಣೆ ನಿರ್ಣಯ ಕೈಗೊಂಡಿದೆ ಎನ್ನಲಾಗುತ್ತಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: