ಮೈಸೂರು

ಮೊದಲ ದಿನ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ

ನಂಜನಗೂಡು ಉಪಚುನಾವಣೆ ಹಿನ್ನೆಲೆಯಲ್ಲಿ ಮೊದಲ ದಿನ ಯಾವುದೇ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆ‌ಯಾಗಿಲ್ಲ.
ತಾಲ್ಲೂಕು ಕಚೇರಿಯಿಂದ ಐದು ಮಂದಿ ನಾಮಪತ್ರ ಸಲ್ಲಿಕೆಯ ಅರ್ಜಿಯನ್ನು ಮಾತ್ರ ಪಡೆದುಕೊಂಡಿದ್ದಾರೆ. ಉಪಚುನಾವಣೆಯ ಕುರಿತಂತೆ ಚುನಾವಣಾ ಸಿಬ್ಬಂದಿಗಳು ಉತ್ಸಾಹದಿಂದ ಕಾರ್ಯ ನಿರ್ವಹಿಸಿದ್ದಾರೆ. ನಂಜನಗೂಡಿನ ಹಳೆ ತಾಲ್ಲೂಕು ಕಚೇರಿಯಲ್ಲಿ ವಿಶೇಷವಾಗಿ ಚುನಾವಣಾಧಿಕಾರಿಗಳ ಕಾರ್ಯಾಲಯ ತೆರೆಯಲಾಗಿದೆ. ಚುನಾವಣಾಧಿಕಾರಿಯಾಗಿರುವ ಮೈಸೂರು ಪಾಲಿಕೆ ಆಯುಕ್ತ ಜಗದೀಶ್ ಅವರು ಮೊದಲ ದಿನದ ಕುರಿತು ಮಾಹಿತಿ ನೀಡಿದ್ದಾರೆ. ಈ‌ ನಡುವೆಯೇ ಘಟಾನುಘಟಿ ನಾಯಕರು ಪ್ರಚಾರ ಮುಂದುವರೆಸಿದ್ದು, ರಾಜಕೀಯ ಮೂಲಗಳ ಪ್ರಕಾರವಾಗಿ ಇವತ್ತು ಮಂಗಳವಾರವಾದ ಕಾರಣ ಯಾರೂ ಕೂಡ ನಾಮಪತ್ರ ಸಲ್ಲಿಕೆ ಮಾಡಿಲ್ಲ ಎನ್ನಲಾಗುತ್ತಿದೆ. (ಎಸ್.ಎನ್-ಎಸ್.ಎಚ್)

Leave a Reply

comments

Related Articles

error: