ಮೈಸೂರು

ನೇಣಿಗೆ ಶರಣಾದ ರೈತ ಮಹಿಳೆ

ನೇಣು ಬಿಗಿದುಕೊಡು ರೈತ ಮಹಿಳೆಯೋರ್ವರು  ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಶೆಟ್ಟಹಳ್ಳಿ ಗ್ರಾಮದಲ್ಲಿ ಘಟನೆ.

ಮೃತ ಮಹಿಳೆಯನ್ನು ತಾಯಮ್ಮ (60) ಎಂದು ಗುರುತಿಸಲಾಗಿದೆ. ತಮ್ಮ ಒಂದೂವರೆ ಎಕರೆ ಜಮೀನಿನಲ್ಲಿ ತಂಬಾಕು ಬೆಳೆದಿದ್ದ ತಾಯಮ್ಮನಿಗೆ ಬೆಳೆ ಕೈಗೂಡಲಿಲ್ಲ. ಅಲ್ಲದೆ‌ ಬೆಳೆಗಾಗಿ ಒಂದು ಲಕ್ಷಕ್ಕೂ ಹೆಚ್ಚು ರೂಪಾಯಿ ಸಾಲ ಮಾಡಿಕೊಂಡಿದ್ದರು. ಆದರೆ ಸಾಲ ತೀರಿಸಲು ಸಾಧ್ಯವಾಗದೆ ಇರುವ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಎಸ್.ಎನ್-ಎಸ್.ಎಚ್)

Leave a Reply

comments

Related Articles

error: