ಪ್ರಮುಖ ಸುದ್ದಿ

ಮಡಿಕೇರಿಯಲ್ಲಿ ವಿವಿಧ ಸಂಘಗಳಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ

ರಾಜ್ಯ( ಮಡಿಕೇರಿ) ಮಾ.13 :- ಭಾರತ ಸರ್ಕಾರ ನೆಹರು ಯುವ ಕೇಂದ್ರ, ತಾಲ್ಲೂಕು ಯುವ ಒಕ್ಕೂಟ ಮಡಿಕೇರಿ ಕಾವೇರಿ ಕಲಾ ವೃಂದ, ಕೋಟೆ ಮಹಿಳಾ ವಿವಿದೋದ್ದೇಶ ಸಹಕಾರ ಸಮಾಜ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಕೋಟೆ ಮಹಿಳಾ ಸಮಾಜ ಸಭಾಂಗಣದಲ್ಲಿ ನಡೆಸಲಾಯಿತು.
ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಕಾನೂನು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ ಉದ್ಘಾಟಿಸಿ ಮಹಿಳಾ ದಿನಾಚರಣೆಯ ಮಹತ್ವದ ಬಗ್ಗೆ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೋಟೆ ಮಹಿಳಾ ಸಮಾಜದ ಅಧ್ಯಕ್ಷರಾದ ಪ್ರೇಮ ಸೋಮಯ್ಯನವರು ವಹಿಸಿದ್ದರು.
ಕಾರ್ಯಕ್ರಮದಲ್ಲಿ ಕಾವೇರಿ ಕಲಾ ವೃಂದದ ಅಧ್ಯಕ್ಷರಾದ ರಾಣಿ ಮಾಚಯ್ಯ ಹಾಗೂ ಮಹಿಳಾ ಪೌರ ಕಾರ್ಮಿಕರಾದ ಮೀನಾಕ್ಷಿ ವೆಂಕಟಪ್ಪ ಇವರನ್ನು ಸನ್ಮಾನಿಸಲಾಯಿತು. (ಕೆಸಿಐ,ಎಸ್.ಎಚ್)

Leave a Reply

comments

Related Articles

error: