ಪ್ರಮುಖ ಸುದ್ದಿವಿದೇಶ

ಕೊರೊನಾ ವೈರಸ್ ಗೆ ಅಮೆರಿಕಾದಲ್ಲಿ 41 ಮಂದಿ ಬಲಿ: ತುರ್ತು ಪರಿಸ್ಥಿತಿ ಘೋಷಿಸಿದ ಟ್ರಂಪ್

ವಾಷಿಂಗ್ಟನ್,ಮಾ.14-ಕೊರೊನಾ ವೈರಸ್ ಗೆ ಅಮೆರಿಕಾದಲ್ಲಿ 41 ಮಂದಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಇದೊಂದು ರಾಷ್ಟ್ರೀಯ ತುರ್ತುಪರಿಸ್ಥಿತಿ ಎಂದು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ನಾನು ಇತ್ತೀಚೆಗೆ ಕೊರೋನಾ ಸೋಂಕಿತರನ್ನು ಸಂಪರ್ಕಿಸಿದ್ದೆ. ಆ ಬಳಿಕ ಪರೀಕ್ಷೆ ಮಾಡಿಸಿಕೊಳ್ಳಲಿಲ್ಲ. ಮುಂದೆ ಸೋಂಕು ಪತ್ತೆ ಪರೀಕ್ಷೆಗೆ ಒಳಪಡಬಹುದು ಎಂದು ತಿಳಿಸಿದ್ದಾರೆ.

ಆದರೆ, ಈ ಬಗ್ಗೆ ವೈದ್ಯರು ನಕಾರ ವ್ಯಕ್ತಪಡಿಸಿದ್ದು, ಟ್ರಂಪ್ ಅವರು ಸೋಂಕು ಪತ್ತೆ ಪರೀಕ್ಷೆಗೆ ಒಳಪಡುವ ಅಗತ್ಯವಿಲ್ಲ. ಏಕೆಂದರೆ ಸೋಂಕು ತಗುಲಿರುವ ಯಾವುದೇ ಲಕ್ಷಣಗಳು ಕಂಡು ಬಂದಿಲ್ಲ. ಹೀಗಾಗಿ ಕೊರೋನಾ ಪರೀಕ್ಷೆ ಅಗತ್ಯವಿಲ್ಲ ಎಂದಿದ್ದಾರೆ. ಆದರೂ ಟ್ರಂಪ್ ಅವರು ಮುಂದೊಂದು ದಿನ ಪರೀಕ್ಷೆಗೆ ಒಳಪಡಬಹುದು ಎಂದು ಹೇಳಿದ್ದಾರೆ.

ಬ್ರೆಜಿಲ್ ಉಪಾಧ್ಯಕ್ಷ ಮೈಕ್ ಪೆನ್ಸ್ ಕಳೆದ ವಾರ ಪರೀಕ್ಷೆ ಮಾಡಿಸಿಕೊಂಡಿದ್ದಾಗ ವೈರಸ್ ಇರುವುದು ದೃಢಪಟ್ಟಿತ್ತು. ಇದೇ ವೇಳೆ ಬ್ರೆಜಿಲ್ ಉಪಾಧ್ಯಕ್ಷಕರನ್ನು ಟ್ರಂಪ್ ಅವರು ಭೇಟಿ ಮಾಡಿದ್ದರು. (ಎಂ.ಎನ್)

Leave a Reply

comments

Related Articles

error: