ಮೈಸೂರು

ಸುಪ್ರೀಂನಲ್ಲಿ ಮತ್ತೆ ಕರ್ನಾಟಕಕ್ಕೆ ಹಿನ್ನಡೆ: 18 ಸಾವಿರ ಕ್ಯೂಸೆಕ್ ನೀರು ಬಿಡಲು ಆದೇಶ

ಮತ್ತೆ ಮೂರು ದಿನ ತಲಾ 6,000 ಕ್ಯೂಸೆಕ್ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂ ಕೋರ್ಟ್ ಕರ್ನಾಟಕಕ್ಕೆ ಆದೇಶಿಸಿದೆ.

ಸೆ.20ರ ಆದೇಶವನ್ನು ಮಾರ್ಪಡಿಸುವಂತೆ ಕೋರಿ ನಿನ್ನೆ ರಾಜ್ಯ ಸರಕಾರವು ಸುಪ್ರೀಂ ಕೋರ್ಟ್‍ಗೆ ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ದೀಪಕ್ ಮಿಶ್ರಾ ಹಾಗೂ ನ್ಯಾ. ಉದಯ್ ಲಲಿತ್ರನ್ನೊಳಗೊಂಡ ದ್ವಿಸದಸ್ಯ ಪೀಠ, ನಿಮ್ಮ ನಿರ್ಣಯ ಏನೇ ಇದ್ದರೂ ನೀರು ಹರಿಸಿ ಎಂದು ಆದೇಶಿಸಿದೆ. ರಾಜ್ಯ ಪರ ವಕೀಲ ಫಾಲಿ ಎಸ್. ನಾರಿಮನ್, ಕಾವೇರಿ ನೀರನ್ನು ತಮಿಳುನಾಡಿಗೆ ಬಿಡಲು ಸಾಧ್ಯವಿಲ್ಲ. ವಿಧಾನಮಂಡಲದಲ್ಲೂ ಈ ಬಗ್ಗೆ ಚರ್ಚೆ ನಡೆದು, ಕಾವೇರಿ ನೀರನ್ನು ಕುಡಿಯಲು ಮಾತ್ರ ಬಳಸುವ ನಿರ್ಣಯ ಕೈಗೊಳ್ಳಲಾಗಿದೆ. ಸದನದ ನಿರ್ಣಯ ಸುಪ್ರೀಂ ಆದೇಶ ಉಲ್ಲಂಘನೆಯಲ್ಲ ಎಂದು ಕೋರ್ಟ್‍ಗೆ ತಿಳಿಸಿದರು.

ತಮಿಳುನಾಡಿಗೆ ಸೆ.28 ಮತ್ತು 29 ರಂದು ನಿತ್ಯ 6 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಆದೇಶಿಸಿದ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಸೆ.30ಕ್ಕೆ ಮುಂದೂಡಿದೆ. ಈ ತೀರ್ಪಿನ ಹಿನ್ನೆಲೆಯಲ್ಲಿ ಬೆಂಗಳೂರು ಮತ್ತು ಮಂಡ್ಯದಲ್ಲಿ ನಮತ್ತೆ ಪ್ರತಿಭಟನೆಗಳು ಆರಂಭವಾಗಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಇಂದಿನ ಸುಪ್ರೀಂ ಕೋರ್ಟ್‍ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ.ಮಾದೇಗೌಡ, ನೀರು ಬಿಡುವುದಿಲ್ಲ ಎಂದು ಹೋರಾಟ ನಡೆಸಿದ್ದೇವೆ. ಸುಪ್ರೀಂ ಕೋರ್ಟ್ ನೀರು ಬಿಡಿ ಎಂದಿದೆ. ನೀರು ಬಿಡಿ ಅಂದ ತಕ್ಷಣ ಬಿಡಲು ಆಗುವುದಿಲ್ಲ. ನೀರು ಬಿಡುವ ನಿರ್ಣಯ ರಾಜ್ಯ ಸರಕಾರದ ಕೈಯಲ್ಲಿದೆ. ನೀರು ಬಿಟ್ಟರೆ ಮತ್ತೆ ಹೋರಾಟ ನಡೆಸುತ್ತೇವೆ. ನಮ್ಮ ನಿರ್ಣಯದಲ್ಲಿ ಯಾವುದೇ ಬದಲಾವಣೆ ಇಲ್ಲ. ತಮಿಳುನಾಡಿನಲ್ಲಿ ನೀರಿದೆ ಆದರೂ ದ್ವೇಷದಿಂದ ನೀರು ಬಿಡಲು ಹೇಳುತ್ತಿದ್ದಾರೆ ಎಂದು ಹೇಳಿದ್ದಾರೆ.

Leave a Reply

comments

Tags

Related Articles

error: