
ಕರ್ನಾಟಕಪ್ರಮುಖ ಸುದ್ದಿ
ಕೊರೊನಾ ವೈರಸ್: ಕರ್ನಾಟಕದಲ್ಲಿ ಮತ್ತೆರೆಡು ಪ್ರಕರಣ ಪತ್ತೆ
ಬೆಂಗಳೂರು,ಮಾ.18-ರಾಜ್ಯದಲ್ಲಿ ಮತ್ತಿಬ್ಬರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಆ ಮೂಲಕ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 13ಕ್ಕೆ ಏರಿದೆ.
ಈ ಬಗ್ಗೆ ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ಬೆಂಗಳೂರಿನಲ್ಲಿ ಮತ್ತಿಬ್ಬರಿಗೆ ಕೋವಿಡ್ 19 ಸೋಂಕು ದೃಢಪಟ್ಟಿದೆ. ಒಬ್ಬರು 56 ವಯಸ್ಸು, ಯುಎಸ್ಎ ಪ್ರವಾಸದಿಂದ ಮಾರ್ಚ್ 6 ರಂದು ಹಿಂದಿರುಗಿದ್ದರು. ಇನ್ನೊಬ್ಬರು 25 ವರ್ಷದ ಮಹಿಳೆಯು, ಸ್ಪೇನ್ ಪ್ರವಾಸದಿಂದ ಹಿಂದಿರುಗಿದ್ದು, ಇಬ್ಬರನ್ನು ಈಗಾಗಲೇ ಪ್ರತ್ಯೇಕಿಸಲ್ಪಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
ಜೊತೆಗೆ ಸೋಂಕಿತರೊಂದಿಗೆ ಸಂಪರ್ಕ ಹೊಂದಿದವರನ್ನು ಪತ್ತೆ ಮಾಡಲಾಗಿ, ಅವರೆಲ್ಲರನ್ನೂ ಕಡ್ಡಾಯವಾಗಿ ಅವರ ಮನೆಯಲ್ಲಿ ಪ್ರತ್ಯೇಕವಾಗಿರಿಸಲಾಗಿದೆ. ಎಲ್ಲಾ ಅಂತಾರಾಷ್ಟ್ರೀಯ ಪ್ರಯಾಣಿಕರನ್ನು ತಪಾಸಣೆ ಮಾಡುವ ಕಾರ್ಯ ನಿರಂತರ ಪ್ರಗತಿಯಲ್ಲಿದೆ ಎಂದಿದ್ದಾರೆ.
ಗೋವಾದಲ್ಲಿ ಮೊದಲ ಕೊರೊನಾ ವೈರಸ್ ಪ್ರಕರಣ ಬೆಳಕಿಗೆ ಬಂದಿದೆ. ಇದನ್ನು ಗೋವಾ ಆರೋಗ್ಯ ಸಚಿವ ವಿಶ್ವಜಿತ್ ರಾಣೆ ಸ್ಪಷ್ಟಪಡಿಸಿದ್ದಾರೆ. ಸೋಂಕಿತ ವ್ಯಕ್ತಿ ನಾರ್ವೆ ದೇಶದವನು. ಮಹಾರಾಷ್ಟ್ರದಲ್ಲಿ ಮತ್ತೊಂದು ಪ್ರಕರಣ ದೃಢಪಟ್ಟಿದ್ದು, ಸೋಂಕಿತ ವ್ಯಕ್ತಿ ಫ್ರಾನ್ಸ್ ಮತ್ತು ನೆದರ್ಲ್ಯಾಂಡ್ ಪ್ರವಾಸ ಮುಗಿಸಿ ಬಂದಿದ್ದ ಎಂದು ತಿಳಿದುಬಂದಿದೆ.
ಮಹಾರಾಷ್ಟ್ರದಲ್ಲಿ 42ಕ್ಕೆ ಏರಿದ ಸೋಂಕಿತರ ಸಂಖ್ಯೆಯಾಗಿದೆ. ದೇಶದಲ್ಲಿ ಸೋಂಕಿತ ಸಂಖ್ಯೆ 149ಕ್ಕೆ ಏರಿಕೆ ಕಂಡಿದೆ. ವಿಶ್ವದಾದ್ಯಂತ ಈವರೆಗೆ 7,100 ಸಾವನ್ನಪ್ಪಿದ್ದಾರೆ. (ಎಂ.ಎನ್)