
ಪ್ರಮುಖ ಸುದ್ದಿ
ಔಷಧಿ ಅಂಗಡಿಗಳಿಗೆ ದಿಢೀರ್ ದಾಳಿ: 2 ಮೊಕದ್ದಮೆ ದಾಖಲು
ರಾಜ್ಯ( ಮಡಿಕೇರಿ) ಮಾ.19 :- ಕೊವಿಡ್ 19 ಸಂಬಂಧಿಸಿದಂತೆ 2 ಪ್ಲೇ, 3 ಪ್ಲೇ ಸರ್ಜಿಕಲ್ ಮಾಸ್ಕ್, ಎನ್ 95 ಮಾಸ್ಕ್, ಸ್ಯಾನಿಟೈಸರ್ ಇವುಗಳನ್ನು ಅಗತ್ಯ ವಸ್ತುಗಳ ಕಾಯ್ದೆ 1955 ಅಡಿ ತರಲಾಗಿದೆ.
ಈ ಸಂಬಂಧ ಕೋವಿಡ್-19 ಸೋಂಕು ಮಾಸ್ಕ್ ಮತ್ತು ಸ್ಯಾನಿಟೈಸರ್ಗಳ ತಪಾಸಣೆಯನ್ನು ಕೈಗೊಳ್ಳಲಾಗುತ್ತಿದೆ. ಕಾನೂನು ಮಾಪನಶಾಸ್ತ್ರ ಇಲಾಖೆ ಹಾಗೂ ಆಹಾರ ಇಲಾಖೆ ಜಂಟಿಯಾಗಿ ತಂಡ ರಚಿಸಲಾಗಿದೆ.
ಆ ನಿಟ್ಟಿನಲ್ಲಿ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕರಾದ ವಿ.ಗಜೇಂದ್ರ 9845154263 ಮತ್ತು ಆಹಾರ ಇಲಾಖೆಯ ಉಪ ನಿರ್ದೇಶಕರಾದ ಗೌರವ ಕುಮಾರ್ ಶೆಟ್ಟಿ-9886680624 ಇವರನ್ನು ನಿಯೋಜಿಸಲಾಗಿದೆ.
ಈಗಾಗಲೇ ಜಂಟಿಯಾಗಿ ಔಷಧಿ ಅಂಗಡಿಗಳಿಗೆ ದಿಡೀರ್ ದಾಳಿ ಮಾಡಿ ಮಾಸ್ಕ್ಗಳ ಮೇಲೆ ಕಾನೂನು ಲೀಗಲ್ ಮೆಟ್ರಲಾಜಿ ಪೊಟ್ಟಣ ಸಾಮಗ್ರಿ ನಿಯಮ 2011 ರ ಅಡಿಯಲ್ಲಿ 2 ಮೊಕದ್ದಮ್ಮೆ ದಾಖಲಿಸಲಾಗಿದೆ. ಹಾಗೂ ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆ ಮಾಸ್ಕ್, ಸ್ಯಾನಿಟೈಸರ್ ಹಾಗೂ ಗ್ಲೌಸ್ಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಿದರೆ ಅಂತವರ ವಿರುದ್ದ ನಿರ್ದಾಕ್ಷೀಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕಾನೂನು ಮಾಪನಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕರಾದ ವಿ.ಗಜೇಂದ್ರ ಅವರು ಎಚ್ಚರಿಕೆ ನೀಡಿದ್ದಾರೆ. (ಕೆಸಿಐ,ಎಸ್.ಎಚ್)