ಕರ್ನಾಟಕಪ್ರಮುಖ ಸುದ್ದಿ

ಉನ್ನತ ಶಿಕ್ಷಣ ಸುಧಾರಣೆಗೆ ಬಜೆಟ್‍ನಲ್ಲಿ ಹಲವಾರು ಕ್ರಮಗಳ ಜಾರಿ

 1. ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಎಲ್ಲಾ ಕಾಲೇಜುಗಳ ವ್ಯಾಪ್ತಿಯನ್ನೊಳಗೊಂಡ ರಾಯಚೂರು ವಿಶ್ವವಿದ್ಯಾನಿಲಯ ಸ್ಥಾಪನೆ.
 2. ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ಅಧಿನಿಯಮ ೨೦೦೦ದ ಸಾಮಾನ್ಯ ಉಪಬಂಧಗಳನ್ನು ಜಾರಿಗೊಳಿಸಲು ಹಾಗೂ ವಿಶ್ವವಿದ್ಯಾನಿಲಯಗಳ ಆಡಳಿತದಲ್ಲಿ ಪಾರದರ್ಶಕತೆಯನ್ನು ತರುವ ದೃಷ್ಟಿಯಿಂದ ಕಾಯ್ದೆಗೆ ತಿದ್ದುಪಡಿ.
 3. ರಾಜ್ಯಾದ್ಯಂತ ಗ್ರಾಮೀಣ ಪ್ರದೇಶದಲ್ಲಿ ತಲಾ ೪ ಕೋಟಿ ರೂ.ಗಳ ವೆಚ್ಚದಲ್ಲಿ ೨೫ ಹೊಸ ಸರ್ಕಾರಿ ಪಾಲಿಟೆಕ್ನಿಕ್ ಪ್ರಾರಂಭ.
 4. ವಿದ್ಯಾರ್ಥಿನಿಯರ ಒಟ್ಟು ದಾಖಲಾತಿ ಪ್ರಮಾಣವನ್ನು ಹೆಚ್ಚಿಸಲು ತಲಾ ೨ ಕೋಟಿ ರೂ.ಗಳ ವೆಚ್ಚದಲ್ಲಿ ಹಂತ ಹಂತವಾಗಿ ಸರ್ಕಾರಿ ಪಾಲಿಟೆಕ್ನಿಕ್‌ಗಳಲ್ಲಿ ೨೩ ಮಹಿಳಾ ಹಾಸ್ಟೆಲ್‌ಗಳ ನಿರ್ಮಾಣ.
 5. ಹೆಣ್ಣುಮಕ್ಕಳ ಮತ್ತು ಗಂಡುಮಕ್ಕಳ ಹಾಸ್ಟೆಲ್‌ಗಳೊಂದಿಗೆ ೧೦ ಮಾದರಿ ಪರಿಶಿ/ ಜಾತಿ/ ಪರಿಶಿ/ ಪಂಗಡ ವಸತಿಯುಕ್ತ ಪ್ರಥಮ ದರ್ಜೆ ಕಾಲೇಜುಗಳ ಸ್ಥಾಪನೆ.
 6. ಮೂಲಸೌಕರ್ಯ ಹಾಗೂ ನವೀಕರಣಕ್ಕಾಗಿ ಶತಮಾನ ಪೂರೈಸಿರುವ ಬೆಂಗಳೂರಿನ ಯುನಿವರ್ಸಿಟಿ ವಿಶ್ಟೇಶ್ವರಯ್ಯ ಕಾಲೇಜ್ ಆಫ್ ಎಂಜಿನಿಯರಿಂಗ್‌ಗೆ ೨೫ ಕೋಟಿ ರೂ. ಹಾಗೂ ಧಾರವಾಡದ ಕರ್ನಾಟಕ ಕಾಲೇಜಿಗೆ ೫ ಕೋಟಿ ರೂ. ಅನುದಾನ.
 7. ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಬೆಳ್ಳಿಹಬ್ಬದ ಅಂಗವಾಗಿ ಮೂಲಭೂತ ಸೌಲಭ್ಯ ಹಾಗೂ ಅಭಿವೃದ್ಧಿಗಾಗಿ ೨೫ ಕೋಟಿ ರೂ. ಅನುದಾನ.
 8. ಕರ್ನಾಟಕ ವಿಶ್ವವಿದ್ಯಾನಿಲಯದ ಮಹಾಯೋಗಿ ವೇಮನ ಅಧ್ಯಯನ ಪೀಠಕ್ಕಾಗಿ ಕಟ್ಟಡ ನಿರ್ಮಾಣಕ್ಕೆ ೩ ಕೋಟಿ ರೂ. ಅನುದಾನ.
 9. ದೇಶದಲ್ಲಿಯೇ ಪ್ರಪ್ರಥಮವಾಗಿ ಮೀಸಲಾತಿ ಜಾರಿಗೆ ತಂದ ಕ್ರಾಂತಿಕಾರಿ ಸಾಹುಮಹಾರಾಜ್‌ರವರ ಹೆಸರಿನಲ್ಲಿ ಕರ್ನಾಟಕ ವಿಶ್ವವಿದ್ಯಾನಿಲಯ, ಧಾರವಾಡದಲ್ಲಿ ಅಧ್ಯಯನ ಪೀಠ ಸ್ಥಾಪನೆ.
 10. ಸರ್ಕಾರಿ ಮತ್ತು ಅನುದಾನಿತ ವೈದ್ಯಕೀಯ, ಇಂಜಿನಿಯರಿಂಗ್, ಪಾಲಿಟೆಕ್ನಿಕ್ ಮತ್ತು ಪ್ರಥಮದರ್ಜೆ ಕಾಲೇಜುಗಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಉಚಿತ  ಲ್ಯಾಪ್‌ಟಾಪ್ ವಿತರಣೆ; ೧.೫ ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲ.
 11. ಉನ್ನತ ಶಿಕ್ಷಣ ಸಂಸ್ಥೆಗಳ ಮೂಲಭೂತ ಸೌಕರ್ಯದಲ್ಲಿನ ಅಂತರವನ್ನು ತುಂಬಲು ಮಧ್ಯಮಾವಧಿ ಆರ್ಥಿಕ ಯೋಜನೆ ತಯಾರಿಕೆ ಹಾಗೂ ಅನುಷ್ಠಾನ.
 12. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಬ್ಯಾರಿ ಅಧ್ಯಯನ ಪೀಠ ಸ್ಥಾಪನೆ.
 13. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಪ್ರತಿ ಆಶಾ ಕಾರ್ಯಕರ್ತರು ಈಗಾಗಲೇ ಪಡೆಯುತ್ತಿರುವ ಪ್ರೋತ್ಸಾಹಧನದ ಜೊತೆ ೧೦೦೦ ರೂ. ಗಳ ಗೌರವಧನ ನೀಡಿಕೆ.
 14. ವಿವಿಧ ಆರೋಗ್ಯ ವಿಮಾ ಕಾರ್ಯಕ್ರಮಗಳಲ್ಲಿ ಹೊಂದಾಣಿಕೆ; ಎಲ್ಲಾ ಕುಟುಂಬಗಳು ಸಾರ್ವತ್ರಿಕ ಆರೋಗ್ಯ ವ್ಯಾಪ್ತೀಕರಣದ ಅಡಿಗೆ ಯಶಸ್ವಿನಿ ಆರೋಗ್ಯ ಸುರಕ್ಷಾ ಯೋಜನೆ ಮುಂದುವರಿಕೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿಯಂತ್ರಣಕ್ಕೆ.
 15. ಕ್ಯಾನ್ಸರ್, ಹೃದಯ ರೋಗಗಳು ಹಾಗೂ ಇತರೆ ಜೀವನಕ್ರಮವನ್ನು ಆಧರಿಸಿದ ರೋಗಗಳಿಗೆ ಚಿಕಿತ್ಸೆಯನ್ನು ನೀಡಲು ದಾವಣಗೆರೆ, ರಾಮನಗರ, ತುಮಕೂರು, ವಿಜಯಪುರ ಮತ್ತು ಕೋಲಾರದಲ್ಲಿ ತಲಾ ೨೫ ಕೋಟಿ ರೂ.ಗಳ ವೆಚ್ಚದಲ್ಲಿ ೫ ಸೂಪರ್ ಸ್ಪೆ/ಲಿಟಿ ಆಸ್ಪತ್ರೆಗಳ ಸ್ಥಾಪನೆ.  ೧೦ ಕೋಟಿ ರೂ. ವೆಚ್ಚದಲ್ಲಿ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆ ಮೇಲ್ದರ್ಜೆಗೆ.
 16. ೩ ಕೋಟಿ ರೂ. ವೆಚ್ಚದಲ್ಲಿ ಮಂಗಳೂರಿನ ವೆನಲಾಕ್ ಆಸ್ಪತ್ರೆಯಲ್ಲಿ ಬೆಂಗಳೂರಿನ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯ ಮಾದರಿಯಲ್ಲಿ ಪ್ರಾದೇಶಿಕ ಹಾಗೂ ಉನ್ನತ ಮಕ್ಕಳ ಆರೋಗ್ಯ ಸಂಸ್ಥೆಯ ಸ್ಥಾಪನೆ.
 17. ಸಂಜಯ್ ಗಾಂಧಿ ಅಪಘಾತ ಮತ್ತು ಅಸ್ಥಿ ಚಿಕಿತ್ಸಾ ಸಂಸ್ಥೆಯಲ್ಲಿ ಬೆನ್ನು ಹುರಿಗಾಯ ಹಾಗೂ ಆಘಾತ ಚಿಕಿತ್ಸೆ ಒದಗಿಸಲು ೧೦ ಹಾಸಿಗೆ ಸಾಮರ್ಥ್ಯದ ವೆಂಟಿಲೇಟರ್ ಸೌಲಭ್ಯವಿರುವ ಐಸಿಯು ಮತ್ತು ೨೦ ಹಾಸಿಗೆಯ ಪಾಲಿಟ್ರಾಮಾ ಕೇಂದ್ರ ಸ್ಥಾಪನೆ- ೧೪.೩೨ ಕೋಟಿ ರೂ.
 18. ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ೧೦ ಕಿ.ಮೀ.ಗಳಿಗಿಂತಲೂ ಹೆಚ್ಚು ದೂರವಿರುವ ಗ್ರಾಮಗಳಲ್ಲಿ ತಲಾ ೧೦ ಲಕ್ಷ ರೂ.ಗಳಂತೆ ಅಗತ್ಯ ವೈದ್ಯರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿಯೊಂದಿಗೆ ೧೫೦ ಆರೋಗ್ಯ ವಿಸ್ತರಣಾ ಚಿಕಿತ್ಸಾಲಯಗಳ ಸ್ಥಾಪನೆ-೧೫ ಕೋಟಿ ರೂ.
 19. ರಾಜ್ಯದಲ್ಲಿನ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ೭೧೧ ಅಂಬ್ಯುಲೆನ್ಸ್‌ಗಳ ಜೊತೆಗೆ ಇಲಾಖೆಯ ೮೨೭ ಅಂಬ್ಯುಲೆನ್ಸ್‌ಗಳನ್ನು ಒಟ್ಟುಗೂಡಿಸಿ, ಪ್ರತಿ ೧೦ ರಿಂದ ೧೫ ಕಿ.ಮೀ. ಸುತ್ತಳತೆಯಲ್ಲಿರುವ ೩೫ ಸಾವಿರ ಜನಸಂಖ್ಯೆಗೆ ಒಂದರಂತೆ ಆಂಬುಲೆನ್ಸ್ ಸೇವೆಯ ವಿಸ್ತರಣೆ.
 20. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಶೇ.೪೦ ರಷ್ಟು ಜನಸಂಖ್ಯೆ ಹೊಂದಿರುವ ೧೨೦೦-೧೩೦೦ ಗ್ರಾಮಗಳ ಜನರಿಗೆ ಆರೋಗ್ಯ ಸೇವೆ ಒದಗಿಸಲು ಮುಂದಿನ ಎರಡು ವರ್ಷಗಳಲ್ಲಿ ಎಸ್‌ಸಿಎಸ್‌ಪಿ/ ಟಿಎಸ್‌ಪಿ ಅನುದಾನದಲ್ಲಿ ಬಳಸಿಕೊಂಡು ೬೪ ಸಂಚಾರಿ ಆರೋಗ್ಯ ಘಟಕಗಳ ಪ್ರಾರಂಭ- ೨೫.೩೪ ಕೋಟಿ ರೂ.
 21. ಬೆಳಗಾವಿ ನಗರ ಲಸಿಕಾ ಸಂಸ್ಥೆಯ ಆವರಣದಲ್ಲಿ ಆಯುಷ್ ಔಷಧ ತಯಾರಿಕಾ ಕೇಂದ್ರ ಸ್ಥಾಪನೆ- ೫ ಕೋಟಿ ರೂ.
 22. ೧೫೦ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ತಲಾ ೩ ಲಕ್ಷ ರೂ.ಗಳ ವೆಚ್ಚದಲ್ಲಿ ಶವಾಗಾರಗಳ ನಿರ್ಮಾಣ- ೪.೫ ಕೋಟಿ ರೂ.
 23. ಚಿತ್ರದುರ್ಗ ಮತ್ತು ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಗಳಲ್ಲಿ ೫೦ ಹಾಸಿಗೆಗಳ ಸಂಯೋಜಿತ ಆಯುಷ್ ಆಸ್ಪತ್ರೆಗಳ ಸ್ಥಾಪನೆ- ೬ ಕೋಟಿ ರೂ.
 24. ರಾಜ್ಯದಲ್ಲಿ ಜನೌಷಧಿ ಮಳಿಗೆಗಳು ಯೋಜನೆಯ ಅಡಿಯಲ್ಲಿ ೨೦೦ ಜೆನರಿಕ್ ಔಷಧ ಮಳಿಗೆಗಳ ಪ್ರಾರಂಭ.
 25. ಔಷಧೀಯ ಸಸ್ಯಗಳ ಗಿಡಮೂಲಿಕೆ ಔಷಧ ಕೋಶ ಉಪಯೋಗಕ್ಕಾಗಿ ಹೆಗ್ಗಡದೇವನ ಕೋಟೆ ತಾಲ್ಲೂಕಿನಲ್ಲಿ ಪ್ರಾಯೋಗಿಕ ಯೋಜನೆಯ ಅನುಷ್ಠಾನ. ಸ್ಥಳೀಯ ಮಟ್ಟದಲ್ಲಿ ಪರಿಣಾಮಕಾರಿ ಆರೋಗ್ಯ ಪಾಲನೆ ಪರಿಹಾರಗಳ ಉದ್ದೇಶಕ್ಕೆ ೨ ಕೋಟಿ ರೂ.

(ಕೆಕೆಕೆ/ಎನ್‍ಬಿಎನ್)

Leave a Reply

comments

Related Articles

error: