ಮೈಸೂರು

ಲಾಕ್ ಡೌನ್ ಹಿನ್ನೆಲೆ : ಅಗತ್ಯ ವಸ್ತುಗಳ ಪೂರೈಕೆಗೆ ತಿ.ನರಸೀಪುರ ತಾಲೂಕು ಆಡಳಿತ ಸಜ್ಜಾಗಿದೆ ; ತಹಶೀಲ್ದಾರ್ ನಾಗೇಶ್

ಮೈಸೂರು,ಆ.26:-  21 ದಿನ ಭಾರತ ಲಾಕ್ ಡೌನ್ ಹಿನ್ನೆಲೆಯಲ್ಲಿ ಅಗತ್ಯ ವಸ್ತುಗಳ ಪೂರೈಕೆಗೆ ತಿ.ನರಸೀಪುರ ತಾಲೂಕು ಆಡಳಿತ ಸಜ್ಜಾಗಿದೆ ಎಂದು  ತಿ.ನರಸೀಪುರ ತಹಶೀಲ್ದಾರ್ ನಾಗೇಶ್ ತಿಳಿಸಿದರು.

ತಿ.ನರಸೀಪುರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು  21ದಿನಗಳಲ್ಲಿ ಭಾರತ ಲಾಕ್ ಡೌನ್ ಹಿನ್ನಲೆಯಲ್ಲಿ ಅಗತ್ಯ ವಸ್ತುಗಳ ಪೂರೈಕೆಗೆ ತಾಲೂಕು ಆಡಳಿತ ಸಜ್ಜಾಗಿದೆ. ದಿನಸಿ ಮತ್ತು ತರಕಾರಿ ಮಾರುಕಟ್ಟೆಗಳಿಗೆ ಯಾವುದೇ ರೀತಿಯ ಕಾಲಮಿತಿ ಇರುವುದಿಲ್ಲ. ಎಂದಿನಂತೆ ದಿನಸಿ ಅಂಗಡಿ ಮತ್ತು ತರಕಾರಿ ಮಾರುಕಟ್ಟೆಗಳು ಕಾರ್ಯನಿರ್ವಹಿಸುತ್ತವೆ. ಸಾರ್ವಜನಿಕರು ದಿನಸಿ ಸಾಮಾನು ಖರೀದಿ ಮಾಡುವಾಗ ಅಂತರ ಕಾಯ್ದುಕೊಳ್ಳಬೇಕು. ಗುಂಪು ಗುಂಪಾಗಿ ಯಾರೂ ಸಹ ಸೇರಬಾರದು ಎಂದರು.

ತಾಲೂಕಿನಲ್ಲಿ ಮಾಂಸ ಮಾರಾಟ ಸಂಪೂರ್ಣ ನಿಷೇಧಿಸಲಾಗಿದೆ. ಚಿಕ್ಕಮ್ಮತಾಯಿ ಯಾತ್ರಿ ಭವನ ಮತ್ತು ಎಪಿಎಂಸಿ ಮಾರುಕಟ್ಟೆಗಳಿಗೆ ತರಕಾರಿ ವ್ಯಾಪಾರವನ್ನು ಸ್ಥಳಾಂತರ ಮಾಡಲಾಗುತ್ತದೆ. ಸಾರ್ವಜನಿಕರು ಎಂದಿನಂತೆ ಸಹಕರಿಸಬೇಕೆಂದು ಮನವಿ ಮಾಡಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: