ಮೈಸೂರು

ಮಹಿಳೆಯ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಬೇಕು : ಮೈ.ನಾ.ಸುಮನಾ

ಜೆಎಲ್‍ಬಿ ರಸ್ತೆಯಲ್ಲಿರುವ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಸುಗಮ ಸಂಗೀತ ಗಾಯಕಿ ಕೆ.ಎಸ್.ಸುರೇಖಾ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಪಾಲ್ಗೊಂಡ ವಕೀಲೆ ಮೈ.ನಾ.ಸುಮನಾ ಮಾತನಾಡಿ ನಮ್ಮ ಶಕ್ತಿ ನಮಗೆ ಗೊತ್ತಿಲ್ಲ ಸಮಾಜದಲ್ಲಿ ಮಹಿಳೆಯ ಪಾತ್ರ ಎಷ್ಟಿದೆ ಎಂದು ಪ್ರತಿಯೊಬ್ಬರು ಅರಿಯಬೇಕಾಗಿದೆ. ಆಕೆಯ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುತ್ತಿಲ್ಲ. ಮಹಿಳೆಯ ಪ್ರತಿ ಶ್ರಮಕ್ಕೆ ಮೌಲ್ಯಯುತವಾದ ಬೆಲೆ ಲಭ್ಯವಾಗಬೇಕಿದೆ ಎಂದರು.

ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಿದ್ದ ಛಾಯಾಚಿತ್ರ ಪ್ರದರ್ಶನಗಳಲ್ಲಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಸಂಪಾದಿಸಿದ ಮಹಿಳಾ ಸಾಧಕರ ಪೂರ್ಣ ವಿವರಗಳನ್ನು ಛಾಯಾ ಚಿತ್ರಗಳ ಮೂಲಕ ದಾಖಲಿಸಲಾಗಿತ್ತು.

ಕಾರ್ಯಕ್ರಮದಲ್ಲಿ  ಮರುಳು ಶಿಲ್ಪ ಕಲಾವಿದೆ ಗೌರಿ, ಕಾಲೇಜು ಪ್ರಾಂಶುಪಾಲ ಡಾ.ಅಣ್ಣೇಗೌಡ, ವಾಣಿಜ್ಯ ಮತ್ತು ನಿರ್ವಹಣಾ ಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಎಂ.ಶಿವಣ್ಣ, ಸಹ ಪ್ರಾಧ್ಯಾಪಕ ಪ್ರೊ.ಸೋಮಣ್ಣ, ಸಂಚಾಲಕ ಮತ್ತಿತರರು ಉಪಸ್ಥಿತರಿದ್ದರು. (ಬಿ.ಎಂ-ಎಸ್.ಎಚ್)

Leave a Reply

comments

Related Articles

error: