ದೇಶಪ್ರಮುಖ ಸುದ್ದಿ

ಕೊರೊನಾ ವೈರಸ್ ಸೋಂಕಿಗೆ ಕೇರಳದಲ್ಲಿ ಮೊದಲ ಬಲಿ

ತಿರುವನಂತಪುರ,ಮಾ.28-ಕೊರೊನಾ ವೈರಸ್ ಸೋಂಕಿಗೆ ಕೇರಳದ ಕೊಚ್ಚಿಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಕೇರಳದಲ್ಲಿ ಇದು ಮೊದಲ ಪ್ರಕರಣವಾಗಿದೆ.

ಕೊಚ್ಚಿ ವೈದ್ಯಕೀಯ ಕಾಲೇಜಿನಲ್ಲಿ 69 ವರ್ಷದ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿ ಇತ್ತೀಚೆಗೆ ದುಬೈಯಿಂದ ಬಂದಿದ್ದು, ಮಾರ್ಚ್‌ 22ರಂದು ನ್ಯುಮೋನಿದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇವರು ಹೃದಯರೋಗಿಯೂ ಆಗಿದ್ದು, ರಕ್ತದ ಒತ್ತಡ ಸಮಸ್ಯೆಯಿಂದಲೂ ಬಳಲುತ್ತಿದ್ದರು ಎನ್ನಲಾಗಿದೆ.

ಶುಕ್ರವಾರ ರಾಜ್ಯದಲ್ಲಿ ಒಂದೇ ದಿನ 39 ಮಂದಿಯಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿತ್ತು. ಈ ಪೈಕಿ, ಕರ್ನಾಟಕ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಕಾಸರಗೋಡು ಜಿಲ್ಲೆಯಲ್ಲಿ 34 ಪ್ರಕರಣ ದೃಢಪಟ್ಟಿತ್ತು. (ಎಂ.ಎನ್)

 

Leave a Reply

comments

Related Articles

error: