ಮೈಸೂರು

ಕೊರೋನಾ ವೈರಸ್ ಬಗ್ಗೆ ಜನತೆ ಎಚ್ಚರವಹಿಸಿ : ಶಾಸಕ ಎಂ.ಅಶ್ವಿನ್ ಕುಮಾರ್  

ಮೈಸೂರು,ಮಾ.30:-  ಕೊರೋನಾ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಅದನ್ನು ತಡೆಯುವ ನಿಟ್ಟಿನಲ್ಲಿ ಶಾಸಕ ಎಂ.ಅಶ್ವಿನ್ ಕುಮಾರ್   ಮತ್ತು  ಅಧಿಕಾರಿಗಳು ಇಂದು ತುರ್ತು ಸಭೆ ನಡೆಸಿದರು.

ಪಟ್ಟಣದ ಮಿನಿವಿಧಾನಸೌದದ ಆವರಣದಲ್ಲಿ  ಸಭೆ ನಡೆದಿದ್ದು, ವ್ಯಾಪಕವಾಗಿ ಹರಡುತ್ತಿರುವ ಕೊರೋನ ವೈರಸ್ ತಡೆಯುವ   ಹಿನ್ನೆಲೆಯಲ್ಲಿ  ಸಭೆ ನಡೆಸಲಾಗಿದೆ.  ಶಾಸಕ ಎಂ.ಅಶ್ವಿನ್ ಕುಮಾರ್ ಅಧಿಕಾರಿಗಳು ಮತ್ತು ಮಾಧ್ಯಮದವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಇಡೀ ದೇಶಾದ್ಯಂತ ಕೊರೋನ ವೈರಸ್ ವ್ಯಾಪಕವಾಗಿ ಹರಡಿದೆ. ಪ್ರಧಾನಿ ನರೇಂದ್ರ ಮೋದಿಯವರು 21 ದಿನಗಳ ಕಾಲ ಲಾಕ್ ಡೌನ್ ಆದೇಶ ಮಾಡಿದ್ದಾರೆ. ಇಂತಹ ತುರ್ತು ಸಂದರ್ಭದಲ್ಲೂ ಮಾಧ್ಯಮ ಮತ್ತು ಅಧಿಕಾರಿಗಳು ಉತ್ತಮವಾಗಿ ತಮ್ಮ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ. ಜನತೆಯು ಕೂಡ ಕೊರೋನಾ ವೈರಸ್ ಬಗ್ಗೆ ಎಚ್ಚರ ವಹಿಸಬೇಕು.  ಜನಪ್ರತಿನಿಧಿಗಳು ಕೂಡ ದಿನನಿತ್ಯ ನಿಮ್ಮ ಸೇವೆ ಮಾಡುತ್ತಿದ್ದಾರೆ. ಕೊರೋನಾ ವೈರಸ್ ಬಗ್ಗೆ ಭಯಪಡುವ ಅಗತ್ಯ ಬೇಕಿಲ್ಲ. ಪ್ರತಿಯೊಬ್ಬರೂ ಕೂಡ ಮುಂಜಾಗ್ರತಾ ಕ್ರಮ ವಹಿಸಿ ಎಂದು ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ  ತಿಳಿಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: