ಪ್ರಮುಖ ಸುದ್ದಿ

ಇಂದು ಸಚಿವ ವಿ.ಸೋಮಣ್ಣ ಭೇಟಿ

ರಾಜ್ಯ(ಮಡಿಕೇರಿ) ಮಾ.31 :- ವಸತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಮಾ.31 ರಂದು ಜಿಲ್ಲೆಗೆ ಭೇಟಿ ನೀಡಿ ಕೊರೋನಾ ಮುಂಜಾಗೃತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ.
ಬೆಳಗ್ಗೆ 11.30 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾರಕ ಕಾಯಿಲೆ ಕೊರೊನಾ (ಕೋವಿಡ್-19) ಬಗ್ಗೆ ಜಿಲ್ಲೆಯಲ್ಲಿ ಕೈಗೊಂಡ ಹಾಗೂ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳು ಸೇರಿದಂತೆ ಸ್ವಚ್ಛತೆ ಹಾಗೂ ಸಾರ್ವಜನಿಕ ಆರೋಗ್ಯ ಕುರಿತಂತೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಲಿದ್ದಾರೆ.
ನಂತರ ಮಧ್ಯಾಹ್ನ 3 ಗಂಟೆಗೆ ಜಿಲ್ಲೆಯ ಗಡಿ ಪ್ರದೇಶಗಳಿಗೆ ಭೇಟಿ ನೀಡಿ ಕೊರೊನಾ (ಕೋವಿಡ್-19) ವ್ಯಾಪಿಸದಂತೆ ಕೈಗೊಂಡ ಮುಂಜಾಗ್ರತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಎಸ್.ಬಿ.ನರೇಂದ್ರ ಅವರು ತಿಳಿಸಿದ್ದಾರೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: