ಮೈಸೂರು

ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆ : ಶಾಸಕರೊಂದಿಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಚರ್ಚಿಸಿದ ಮಾಜಿ ಸಿಎಂ ಹೆಚ್ ಡಿಕೆ

ಮೈಸೂರು,ಮಾ.31:- ಮೈಸೂರು ಜಿಲ್ಲೆಯಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆ ಮೈಸೂರಿನ ಸ್ಥಿತಿಗತಿಯ ಕುರಿತು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರು ನಿನ್ನೆ  ಜಿಲ್ಲೆಯ ಶಾಸಕರೊಂದಿಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಚರ್ಚಿಸಿದರು.

ಎಲ್ಲ ಸಮಸ್ಯೆ ನಿವಾರಣೆಗೆ ಸರ್ಕಾರ ಮಾಡುತ್ತೆ ಅಂತ ಕಾಯದೇ ಶಾಸಕರೇ ಸ್ಥಳೀಯವಾಗಿ ಜನರಲ್ಲಿ ಜಾಗೃತಿ ಮೂಡಿಸಿ, ಸಾರ್ವಜನಿಕರಿಗೆ ನೆರವಾಗುವಂತೆ ಕುಮಾರಸ್ವಾಮಿ ತಿಳಿಸಿದರು.

ವಿಡಿಯೋ ಕಾನ್ಫರೆನ್ಸ್‌ನಲ್ಲಿ ಮಾಜಿ ಸಚಿವ, ಕೆಆರ್‌ ನಗರ ಶಾಸಕ ಸಾ.ರಾ ಮಹೇಶ್‌, ಟಿ. ನರಸೀಪುರ ಶಾಸಕ ಅಶ್ವಿನ್‌ ಕುಮಾರ್‌, ಪಿರಿಯಾಪಟ್ಟಣ ಶಾಸಕ ಮಹದೇವು ಪಾಲ್ಗೊಂಡಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: