ಮೈಸೂರು

ಜ್ಯುಬಿಲಿಯಂಟ್ ಕಾರ್ಖಾನೆಯ ಕಾರ್ಮಿಕರಿಗೆ ಬಿಸಿಎಂ ಹಾಸ್ಟೆಲ್ ನಲ್ಲಿ ಹೋಂ ಕ್ವಾರೆಂಟೈನ್ : ವಿರೋಧಿಸಿ ಪ್ರತಿಭಟನೆ

ಮೈಸೂರು,ಮಾ.31:- ಜ್ಯುಬಿಲಿಯಂಟ್  ಕಾರ್ಖಾನೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯೋರ್ವರಿಗೆ ಕೊರೋನಾ ವೈರಸ್ ಸೋಂಕು ಕಾಣಿಸಿಕೊಂಡಿತ್ತು. ಬಳಿಕ ಅಲ್ಲಿನ 9ಮಂದಿ ಕಾರ್ಮಿಕರಿಗೆ ಕೊರೋನಾ ವೈರಸ್ ಇರುವುದು ದೃಢಪಟ್ಟಿತ್ತು. ಅಲ್ಲಿ ಒಂದು ಸಾವಿರಕ್ಕಿಂತಲೂ ಅಧಿಕ ಮಂದಿ ಕಾರ್ಮಿಕರಿದ್ದಾರೆ. ಅವರನ್ನು  ಹೋಂ ಕ್ವಾರೆಂಟೈನ್ ಮಾಡಲಾಗಿದ್ದು,  ನಂಜನಗೂಡಿನ ಕೆ ಎಚ್ ಬಿ ಕಾಲೋನಿಯಲ್ಲಿರುವ ಬಿಸಿಎಂ ಹಾಸ್ಟೆಲ್ ನಲ್ಲಿ ಇಡಲಾಗುವುದು ಎಂಬ ಮಾಹಿತಿ ತಿಳಿದು ಅಲ್ಲಿನ ಅಕ್ಕಪಕ್ಕದ ನಿವಾಸಿಗಳು ಅದನ್ನು ವಿರೋಧಿಸಿ  ಹಾಸ್ಟೆಲ್ ಮುಂಭಾಗ ನಿನ್ನೆ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ನಗರಸಭಾ ಸದಸ್ಯರುಗಳಾದ ಎಸ್.ಪಿ.ಮಹೇಶ್, ಎನ್.ಎಸ್.ಯೋಗೀಶ್, ಪ್ರಾಂಶುಪಾಲ ಮಹದೇವಯ್ಯ, ರಿಟೈರ್ಡ್ ಎಎಸ್ ಐಗಳಾದ ರಂಗಸ್ವಾಮಿ, ಗೋವಿಂದರಾಜ್, ಶಿವನಂಜಯ್ಯ ಸೇರಿದಂತೆ 50 ಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು. ಎಲ್ಲರೂ ಪರಸ್ಪರ ಅಂತರ ಕಾಯ್ದುಕೊಂಡೇ  ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.  (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: