ಪ್ರಮುಖ ಸುದ್ದಿಮೈಸೂರು

ಕ್ವಾರೆಂಟೈನ್ ನಲ್ಲಿರುವವರು ಮನೆಯಿಂದ ಹೊರಗೆ ಬಂದು ತೊಂದರೆ ಕೊಟ್ಟರೆ ಕ್ರಿಮಿನಲ್ ಕೇಸ್ ದಾಖಲು : ಸಚಿವ ಸೋಮಣ್ಣ ಎಚ್ಚರಿಕೆ

ಮೈಸೂರು,ಮಾ.31:-  ಮೈಸೂರಿನಲ್ಲಿ ಕೊರೊನಾ ಪೀಡಿತರ ಸಂಖ್ಯೆ 12ಕ್ಕೆ ಏರಿಕೆಯಾಗಿದ್ದು,  ವಿದೇಶದಿಂದ ಬಂದವರಿಬ್ಬರಿಗೆ,   ನಂಜನಗೂಡಿನ ಜ್ಯುಬಿಲಿಯೆಂಟ್‌ ಕಾರ್ಖಾನೆಯಲ್ಲಿ ಕರ್ತವ್ಯ ನಿರ್ವಹಿಸಿದ  ಐದು ಮಂದಿಗೆ ಕೊರೊನಾ ಸೋಂಕು ತಗುಲಿದೆ ಎಂದು ಸಚಿವ ಸೋಮಣ್ಣ ತಿಳಿಸಿದ್ದಾರೆ.

ನಿನ್ನೆ  ಜಿ.ಪಂ.ನಲ್ಲಿ ನಡೆದ ಸಭೆಯ ಬಳಿಕ ಸುದ್ದಿಗಾರೊಂದಿಗೆ  ಮಾತನಾಡಿ  ಜ್ಯುಬಿಲಿಯಂಟ್ ಕಾರ್ಖಾನೆಯ 1443 ಜನ ಹೋಮ್ ಕ್ವಾರೆಂಟೈನ್ ನಲ್ಲಿದ್ದಾರೆ. 821 ಜನ ಹೋಮ್ ಕ್ವಾರಂಟೈನ್ ಮುಗಿಸಿದ್ದಾರೆ. ಅದರಲ್ಲಿಂದು  ಹೊಸದಾಗಿ 4 ಪ್ರಕರಣ ಸೇರ್ಪಡೆಯಾಗಿದೆ. ಹಾಗಾಗಿ ಕೊರೊನಾ ಪಾಸಿಟಿವ್‌ ಪ್ರಕರಣದ ಸಂಖ್ಯೆ 12ಕ್ಕೆ ಏರಿಕೆಯಾಗಿದೆ ಎಂದಿದ್ದಾರೆ.

ಈಗಾಗಲೇ ನಂಜನಗೂಡಿನಲ್ಲಿಯೇ 753 ಜನ ಹೋಮ್ ಕ್ವಾರಂಟೈನ್ ನಲ್ಲಿದ್ದಾರೆ. ಅಂತಹವರ ಮನೆಗೆ ಪೊಲೀಸರ ನೇಮಕ ಮಾಡಲಾಗಿದೆ. ಕ್ವಾರೆಂಟೈನ್ ನಲ್ಲಿ ಇರುವವರನ್ನು ಮಾನಿಟರಿಂಗ್ ಮಾಡುತ್ತಿದ್ದೇವೆ. ಎಲ್ಲಾ ಕಡೆ ಮಾಸ್ಕ್ ಗಳ ವಿತರಣೆ ಕಾರ್ಯ ನಡೆಯುತ್ತಿದೆ. ಈಗಾಗಲೇ 18 ವೆಂಟಿಲೇಟರ್ಸ್ ಇದೆ, ಅವಶ್ಯಕತೆ ಇದ್ದರೆ ಹೆಚ್ಚಿನ ಪ್ರಮಾಣದಲ್ಲಿ ಬಳಕೆ ಮಾಡುತ್ತೇವೆ . ಕ್ವಾರೆಂಟೈನ್ ಮಾನಿಟರಿಂಗ್ ಮಾಡಲು ವಿಶೇಷ ತಂಡವನ್ನು ರಚಿಸಲಾಗಿದ್ದು, ಅಂತಹವರು ಮನೆಯಿಂದ ಹೊರಗೆ ಬಂದು ತೊಂದರೆ ಕೊಟ್ಟರೆ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು.  ಸಾಮಾಜಿಕ ಅಂತರ ಕಾಪಾಡಲು ಎಲ್ಲಾ ತಾಲೂಕುಗಳ ಬಿಇಓ ನೇತೃತ್ವದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ರಚನೆ ಮಾಡಲಾಗಿದೆ ಎಂದು ತಿಳಿಸಿದರು.

ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ವಸ್ತು ಪಡೆಯಲು ಕೆಲವರಿಗೆ ತೊಡಕಾಗುತ್ತಿದೆ ಎಂಬ ದೂರು ಕೇಳಿ ಬಂದಿವೆ. ರೇಷನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡದಿರುವುದೇ ಸಮಸ್ಯೆಯಾಗುತ್ತಿರುವುದು ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಆಧಾರ್ ಕಾರ್ಡ್ ಇರಲೀ, ಇಲ್ಲದಿರಲೀ ಪಡಿತರ ವಸ್ತುಗಳನ್ನು ನೀಡುವಂತೆ ಸೂಚಿಸಿದ್ದೇನೆ. ಅಲ್ಲದೆ ವಸತಿಹೀನರು, ಅಲೆಮಾರಿಗಳ ಕುಟುಂಬಗಳಿಗೂ ಮುಂದಿನ 15 ದಿನದವರೆಗೂ ದಿನಸಿ ಹಾಗೂ ಅಗತ್ಯ ವಸ್ತುಗಳನ್ನು ಪೂರೈಸಲು ಸೂಚಿಸಿದ್ದೇನೆ ಎಂದು ವಿವರಿಸಿದರು.

ಜ್ಯುಬಿಲಿಯಂಟ್ ಕಾರ್ಖಾನೆ ಕಾರ್ಮಿಕರಿಗೆ ಶೇ 30ರಿಂದ 40 ರಷ್ಟು ವೇತನದ ಹಣವನ್ನು ನಗದು ರೂಪದಲ್ಲಿ ತಲುಪಿಸಲು ಜಿಲ್ಲಾಡಳಿತದಿಂದ ಕ್ರಮ ಕೈಗೊಳ್ಳಲಾಗುವುದು. ಎಪಿಎಂಸಿಯಲ್ಲಿ ತರಕಾರಿ ಮಾರಾಟ ಸಮಸ್ಯೆ ಪರಿಹಾರಕ್ಕೆ  ಕ್ರಮ ಕೈಗೊಳ್ಳಲಾಗುವುದು.  ಸ್ಚಚ್ಛತೆ ಕಾಪಾಡಲು ನಗರದಲ್ಲಿ ಆದ್ಯತೆ ನೀಡಲಾಗಿದೆ ಎಂದರು.

ಈ ಸಂದರ್ಭ ಸಂಸದ ಪ್ರತಾಪ್ ಸಿಂಹ, ಶಾಸಕ ಜಿ.ಟಿ.ದೇವೇಗೌಡ, ಎಸ್.ಎ.ರಾಮದಾಸ್, ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ಎಸ್ಪಿ ಸಿ.ಬಿ.ರಿಷ್ಯಂತ್ ಮತ್ತಿತರರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: