ಮೈಸೂರು

ಮೈಸೂರು ಜಿಲ್ಲೆಯಲ್ಲಿ ಮತ್ತೆರಡು ಕೊರೋನಾ ವೈರಸ್ ಸೋಂಕು ಪತ್ತೆ : 14ಕ್ಕೇರಿದ ಸೋಂಕಿತರ ಸಂಖ್ಯೆ

ಮೈಸೂರು,ಮಾ.31:- ಮೈಸೂರು ಜಿಲ್ಲೆಯಲ್ಲಿ ಕೊರೋನಾ ವೈರಸ್ ಸೋಂಕು ಪೀಡಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಇಂದು ಮೈಸೂರು ಜಿಲ್ಲೆಯಲ್ಲಿ  ಮತ್ತಿಬ್ಬರಿಗೆ ಕೊರೋನ ವೈರಸ್ ಸೋಂಕು ದೃಢಪಟ್ಟಿದೆ.

ನಂಜನಗೂಡಿನ ಜ್ಯುಬಿಲಿಯಂಟ್  ಕಾರ್ಖಾನೆಯ  ಮತ್ತಿಬ್ಬರು ಕಾರ್ಮಿಕರಿಗೆ ಸೋಂಕಿರುವುದು ದೃಢಪಟ್ಟಿದೆ. 52 ನೇ ಸೋಂಕಿತನಿಂದ ಇಬ್ಬರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸೋಂಕಿರುವುದನ್ನು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ದೃಢಪಡಿಸಿದ್ದಾರೆ. ಇದೀಗ ಸೋಂಕಿತರ ಸಂಖ್ಯೆ 14ಕ್ಕೇರಿದೆ.

ಮೈಸೂರಿನ ಕೊವೀಡ್ ಆಸ್ಪತ್ರೆಗೆ ಈ ಇಬ್ಬರು ಸೋಂಕಿತರನ್ನು ದಾಖಲಿಸಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: