ಪ್ರಮುಖ ಸುದ್ದಿ

ಮಾಂಸ ಮಾರಾಟ ವಿಚಾರ : ಉಲ್ಟಾ ಹೊಡೆದ ಉಸ್ತುವಾರಿ ಸಚಿವರು

ರಾಜ್ಯ( ಮಡಿಕೇರಿ) ಮಾ.31 :- ಮೀನು ಸೇರಿದಂತೆ ಯಾವುದೇ ರೀತಿಯ ಮಾಂಸ ಮಾರಾಟಕ್ಕೆ ಜಿಲ್ಲೆಯಲ್ಲಿ ಅವಕಾಶ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಸ್ಪಷ್ಟಪಡಿಸಿದ್ದಾರೆ. ಮಂಗಳವಾರ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾಂಸ ಮಾರಾಟಕ್ಕೆ ಅವಕಾಶ ನೀಡಲು ತೀರ್ಮಾನಿಸಲಾಗಿತ್ತು. ಆದರೆ ದೇಶಾದ್ಯಂತ ಲಾಕ್‍ಡೌಡ್ ಇರುವುದರಿಂದ ಈ ಹಿಂದಿನ ನಿರ್ಧಾರದಂತೆ ಯಾವುದೇ ರೀತಿಯ ಮಾಂಸ ಮಾರಾಟಕ್ಕೆ ಅವಕಾಶ ನೀಡಲಾಗುವುದಿಲ್ಲ ಎಂದು ಬಳಿಕ ಅವರು ಸ್ಪಷ್ಟನೆ ನೀಡಿದ್ದಾರೆ.
ಮೀನು ಹೊರತು ಪಡಿಸಿ ಮಾಂಸ ಮಾರಾಟಕ್ಕೆ ಅವಕಾಶ ನೀಡಲಾಗುವುದು ಎಂದು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆಯಲ್ಲಿ ಸಚಿವ ಸೋಮಣ್ಣ ಘೋಷಿಸಿದ್ದರು. ಆದರೆ ಸಭೆ ಮುಗಿದ ಸ್ವಲ್ಪ ಸಮಯದಲ್ಲೇ ಅವಕಾಶವಿಲ್ಲವೆಂದು ತಿಳಿಸುವ ಮೂಲಕ ಗೊಂದಲ ಸೃಷ್ಟಿಸಿದರು.
ಸಚಿವರ ಗೊಂದಲಮಯ ಹೇಳಿಕೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕರಿಂದ ಆಕ್ಷೇಪ ವ್ಯಕ್ತವಾಯಿತು. ಮಾಂಸಹಾರಿಗಳು ಹೆಚ್ಚಿನ ಸಂಖ್ಯೆಯಲ್ಲಿರುವ ಕೊಡಗು ಜಿಲ್ಲೆಯಲ್ಲಿ ಮಾಂಸ ಮಾರಾಟಕ್ಕೆ ಅವಕಾಶ ನೀಡಬೇಕು. ಅಕ್ಕಪಕ್ಕದ ಕೆಲವು ಜಿಲ್ಲೆಗಳಲ್ಲಿ ಮಾರಾಟಕ್ಕೆ ಅನುಮತಿ ನೀಡಲಾಗಿದೆ, ಕೊಡಗಿನ ಬಗ್ಗೆ ತಾರತಮ್ಯ ಯಾಕೆ ಎನ್ನುವ ಅಭಿಪ್ರಾಯ ವ್ಯಕ್ತವಾಯಿತು.
ಮತ್ತೊಂದೆಡೆ ಕೊರೋನಾ ವೈರಸ್ ಆತಂಕ ಮುಗಿಯುವವರೆಗೆ ಮಾಂಸ ಮಾರಾಟಕ್ಕೆ ಅವಕಾಶ ನೀಡಬಾರದೆನ್ನುವ ಒತ್ತಾಯವೂ ಕೇಳಿ ಬಂತು.(,.)ಕೆಸಿಐಎಸ್ಎಚ್

Leave a Reply

comments

Related Articles

error: