ಪ್ರಮುಖ ಸುದ್ದಿ

ಡಿಸಿಸಿ ಬ್ಯಾಂಕ್‍ನಿಂದ ಸಿಎಂ ನಿಧಿಗೆ 10 ಲಕ್ಷ ರೂ. ಚೆಕ್ ಹಸ್ತಾಂತರ

ರಾಜ್ಯ( ಮಡಿಕೇರಿ)ಏ.1:- ಕೊಡಗು ಡಿಸಿಸಿ ಬ್ಯಾಂಕ್ ವತಿಯಿಂದ ಮುಖ್ಯಮಂತ್ರಿ ಅವರ ಪರಿಹಾರ ನಿಧಿಗೆ 10 ಲಕ್ಷ ರೂ.ಗಳ ದೇಣಿ ಚೆಕ್ ನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಣ್ಣ ಅವರಿಗೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಕೊಡಂದೆರ ಬಾಂಡ್ ಗಣಪತಿ ಅವರು ಹಸ್ತಾಂತರಿಸಿದರು.
ಜಿಲ್ಲಾಸ್ಪತ್ರೆಗೆ ಡಿಸಿಸಿ ಬ್ಯಾಂಕ್ ವತಿಯಿಂದ ಅಂದಾಜಿ 6.50ಲಕ್ಷ ರೂ. ವೆಚ್ಚದಲ್ಲಿ ಒಂದು ವೆಂಟಿಲೇಟರ್ ಒದಗಿಸಲು ತೀರ್ಮಾನಿಸಲಾಗಿದೆ ಎಂದು ಅಧ್ಯಕ್ಷರಾದ ಬಾಂಡ್ ಗಣಪತಿ ಅವರು ಹೇಳಿದರು.
ಈ ಸಂಧರ್ಭ ಶಾಸಕರಾದ ಕೆ.ಜಿ ಬೋಪಯ್ಯ, ಎಂ.ಪಿ ಅಪ್ಪಚ್ಚು ರಂಜನ್, ಸುನೀಲ್ ಸುಬ್ರಮಣಿ, ಜಿ.ಪಂ ಅಧ್ಯಕ್ಷರಾದ ಬಿ.ಎ ಹರೀಶ್, ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಸುಮನ್ ಡಿ.ಪನ್ನೇಕರ್ ಇತರರು ಹಾಜರಿದ್ದರು. (ಕೆಸಿಐ,ಎಸ್.ಎಚ್)

Leave a Reply

comments

Related Articles

error: